ನ್ಯೂಜ್ ಡೆಸ್ಕ್:ಅಪಾರ್ಟ್ಮೆಂಟ್ ವೊಂದರಲ್ಲಿ ವಾಸವಿದ್ದ ಮಹಿಳೆಯೊಬ್ಬರಿಗೆ ಇಬ್ಬರು ಕಳ್ಳರು ಚಾಕು ತೋರಿಸಿ ಆಭರಣಗಳನ್ನು ದೋಚಿ ನಂತರ 27 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿರುತ್ತದೆ.ಭುವನೇಶ್ವರದ ಮೈತ್ರಿ ವಿಹಾರ್ನಲ್ಲಿ ಸೆಪ್ಟೆಂಬರ್ 30 ರಂದು ಮುಂಜಾನೆ 2 ಗಂಟೆ ಸುಮಾರಿಗೆ ಈ ಅಪರಾಧ ಘಟನೆ ನಡೆದಿದ್ದು ಪೊಲೀಸರು ಪಡೆದಿರುವ ದೂರಿನ ಪ್ರಕಾರ, ಮಹಿಳೆ ವಾಸವಿದ್ದ ಅಪಾರ್ಟ್ಮೆಂಟ್ ಬಂದಿರುವ ಕಳ್ಳರು ಚಾಕು ತೋರಿಸಿ ಮೊದಲು ಆಕೆಯ ಆಭರಣಗಳು ಮತ್ತು ಮೊಬೈಲ್ ಫೋನ್ ಅನ್ನು ದೋಚಿದ್ದಾರೆ ಮತ್ತು ನಂತರ ಸಹಾಯಕ್ಕಾಗಿ ಕಿರುಚಿದರೆ 2 ವರ್ಷದ ಮಗಳನ್ನು ಕೊಲ್ಲುವುದಾಗಿ ಬೆದರಿಸಿ ಮಹಿಳೆಯರನ್ನು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಮಹಿಳೆ ಭುವನೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, 10 ದಿನಗಳ ಹಿಂದೆಯಷ್ಟೇ ಫ್ಲಾಟ್ಗೆ ತೆರಳಿದ್ದಳು ಎಂದು ಪೊಲೀಸರು ಹೇಳುತ್ತಾರೆ.ಮನೆಗೆ ಹೋಗಲು ಕಳ್ಳರು ಬಿದಿರಿನ ಕಂಬಗಳನ್ನು ಬಳಸಿ ಕಟ್ಟಡವನ್ನು ಪ್ರವೇಶಿಸಿರಬಹುದು ಎಂದು ಅವರು ಶಂಕಿಸಿದ್ದಾರೆ. ಅಪರಾಧಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅತ್ಯಾಚಾರ ಮತ್ತು ಲೂಟಿ ಪ್ರಕರಣ ದಾಖಲಾಗಿದೆ. ಕಟ್ಟಡದಲ್ಲಿ ಸಿಸಿಟಿವಿ ಕ್ಯಾಮೆರಾ ಇಲ್ಲದ ಕಾರಣ ತನಿಖೆ ಕಷ್ಟಕರವಾಗಿದ್ದು, ಪೊಲೀಸರು ಸಮೀಪದ ಪ್ರದೇಶಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
Trending
- ಶ್ರೀನಿವಾಸಪುರ:ಪದವೀಧರ ಚುನಾವಣೆ ಮೈತ್ರಿ ಅಭ್ಯರ್ಥಿ ಗೆಲ್ಲಿಸಲು ತ್ರಿಮೂರ್ತಿಗಳು ಒಂದಾದರ?
- ತಿರುವಣ್ಣಾಮಲೈ ದೇಗುಲಕ್ಕೆ ಅನ್ಯಧರ್ಮಿಯ ಪ್ರವೇಶ,ವಿವಾದ!
- ಪುರಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ರಣರಂಗವಾದ ಪುಂಗನೂರು!
- ಬೆಂಗಳೂರು ಪಬ್ ನಲ್ಲಿ ಪೋಲಿಸರೊಂದಿಗೆ ಗಲಾಟೆ ಆಂಧ್ರ IAS ಅಧಿಕಾರಿ ವಿರುದ್ಧ ಪ್ರಕರಣ!
- ಚಿಂತಾಮಣಿ ಪಾಲಿಟೆಕ್ನಿಕ್ ಮೈದಾನದಲ್ಲಿ ದಸರಾ ಉತ್ಸವದ ವೈಭವ!
- ಶ್ರೀನಿವಾಸಪುರ:ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಪ್ರಚಾರಕ್ಕೆ ಸಿ.ಟಿ. ರವಿ ಚಾಲನೆ
- ಚಿಂತಾಮಣಿ:ಲಾಂಗ್ ನಿಂದ ಕೊಚ್ಚಿ ವಿವಾಹಿತ ಮಹಿಳೆ ಬರ್ಬರ ಹತ್ಯೆ !
- ಹಣ್ಣಿನ ಹೆಸರಿನಿಂದ ಆರಂಭವಾಗುವ ಅಪರೂಪದ ಗ್ರಾಮ ‘ಪಣಸಮಾಕಲಹಳ್ಳಿ’!
Thursday, October 22



