ಶ್ರೀನಿವಾಸಪುರ: ಶ್ರೀನಿವಾಸಪುರದ RTO ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಶ್ರೀನಿವಾಸಪುರದ ತಾಲೂಕಿನ ತಾಡಿಗೋಳ್ ಕ್ರಾಸ್ ಚೆಕ್ ಪೋಸ್ಟ್ ಹಾಗೂ ಮುಳಬಾಗಲಿನ ನಂಗಲಿ ಚೆಕ್ ಪೋಸ್ಟ್ ಎರಡು ಚೆಕ್ ಪೋಸ್ಟ್ ಗಳ ಮೇಲೆ ಓಟ್ಟಿಗೆ ಮುಂಜಾನೆ ಸುಮಾರು 3 ಗಂಟೆ ಸಮಯದಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು ಈ ಸಂದರ್ಭದಲ್ಲಿ ಆರ್ ಟಿ ಓ ಕಛೇರಿಗಳಲ್ಲಿ ಇದ್ದಂತ ದಾಖಲೆಗಳು ಹಾಗೂ ಹಣದ ವ್ಯವಹಾರದ ಬಗ್ಗೆ ಸಹ ಪರಿಶೀಲನೆ ನಡೆಸಲಾಗಿ ಒಂದು ಚೆಕ್ ಪೋಸ್ಟ್ ನಲ್ಲಿ 20 ಸಾವಿರಕ್ಕೂ ಅಧಿಕ ಹಣ ಹಾಗೂ ಮತ್ತೊಂದು ಚೆಕ್ ಪೋಸ್ಟ್ ನಲ್ಲಿ 400 ಹಣ ಕಡಿಮೆ ಇರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ ಇನ್ನು ಎರಡು ಕಚೇರಿಗಳಲ್ಲಿ ಸತತ ಸುಮಾರು 8 ಗಂಟೆಗೂ ಅಧಿಕಕಾಲ ತನಿಖೆ ನಡೆಸಿರುವ ಅಧಿಕಾರಿಗಳು ಹಲವು ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಜಂಟಿ ಕಾರ್ಯಾಚರಣೆಯಲ್ಲಿ ಕೋಲಾರ ಲೋಕಾಯುಕ್ತ ಅಧಿಕಾರಿಗಳೊಂದಿಗೆ ಬೆಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ಭಾಗವಹಿಸಿದ್ದು ಕೋಲಾರ ಲೋಕಾಯುಕ್ತ ವರಿಷ್ಠಾಧಿಕಾರಿ ಧನುಂಜಯ್ ನೇತೃತ್ವ ವಹಿಸಿದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



