ಮೈಸೂರು:ಮೂರು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯುಧ ಪೂಜೆ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದ್ದ ಅವರು ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ ಸುದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ತಾಯಿ ಚಾಮುಂಡೇಶ್ವರಿ ಆಶಿರ್ವಾದದಿಂದ ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜಕೀಯದಲ್ಲಿ ವೈರಿಗಳು ಹಾಗು ಹಿತೈಷಿಗಳು ಅಭಿಮಾನಿಗಳೂ ಇರುತ್ತಾರೆ, ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ.ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇ ಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದರು.
ನಾಡಿನ ಜನರಿಗೆ ದಸರಾ ಹಬ್ಬದ ಶುಭಾಶಯಗಳು ತಿಳಿಸಿದ ಅವರು ನಾಳೆ ನಡೆಯುವ ಜಂಬೂಸವಾರಿಯಲ್ಲಿ ಭಾಗವಹಿಸುತ್ತೇನೆ. ಸುಧೀರ್ಘವಾಗಿ ಹೆಚ್ಚು ಬಾರಿ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡುತ್ತಿದ್ದೇನೆ. ನಾಡಿನ ಜನರ ಹಾಗೂ ದೇವರ ಆಶೀರ್ವಾದದಿಂದ ಪುಷ್ಪಾರ್ಚನೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಸದಾ ಇರುತ್ತದೆ
ನನ್ನ ಮೇಲೆ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಸದಾ ಇರುತ್ತದೆ. ಜನರು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಅದಕ್ಕೆ ಇಷ್ಟೊಂದು ಬಾರಿ ಪುಷ್ಪಾರ್ಚನೆ ಮಾಡಲು ಅವಕಾಶ ಸಿಕ್ಕಿದೆ ಎಂದರು
ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟ ಹಮ್ಮಿಕೊಳ್ಳುತ್ತಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಕುರಿತಾಗಿ ಪ್ರತಿಕ್ರಿಯಿಸಿ,ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವ ಸಂಪುಟದ ಉಪಸಮಿತಿಗೆ ಇರುತ್ತದೆ. ಗೃಹಸಚಿವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ಬಗ್ಗೆ ಪರಿಶೀಲನೆ ಮಾಡಿದ ನಂತರ ಮಾತನಾಡುತ್ತೇನೆ. ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳ ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ ಹೋರಾಟ ಎಂದಿಗೂ ಇರುವುದಿಲ್ಲ ಎಂದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



