ಚಿಂತಾಮಣಿ:ಚಿಂತಾಮಣಿ ನಗರದಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ ವಾರ್ಡ್ ನಂ:24ರ ನಾರಸಿಂಹಪೇಟೆಯಲ್ಲಿ ಪ್ರತಿವರ್ಷದಂತೆ ನಾರಸಿಂಹಪೇಟೆ ಯುವಕರ ಬಳಗದ ವತಿಯಿಂದ ನವರಾತ್ರಿ ಅಂಗವಾಗಿ ವಿಶೇಷವಾಗಿ ಶ್ರೀ ದರ್ಗಾಮಾತೆಯನ್ನು ಪ್ರತಿಷ್ಠಾಪನೆ ಮಾಡಿ ಒಂಬತ್ತು ದಿನಗಳಿಂದ ಶ್ರದ್ಧಾ ಭಕ್ತಿಯಿಂದ ಪೂಜಿಸಿ ಪುನಿತರಾಗಿ ನವರಾತ್ರಿ ಸಂಭ್ರಮಿಸಿದ್ದು ಕಾರ್ಯಕ್ರಮ ಎಲ್ಲರ ಗಮವನ್ನು ಸೆಳೆಯಿತು. ಸಂಸದ ಶಾಸಕರು ಭಾಗಿ. ನಾರಸಿಂಹ ಪೇಟೆಯ ಶ್ರೀ ದುರ್ಗಾ ದೇವಿಗೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಕೋಲಾರದ ಸಂಸದ ಮಲ್ಲೇಶ್ ಬಾಬು, ಶ್ರೀನಿವಾಸಪುರ ಶಾಸಕ ಜಿ.ಕೆ ವೆಂಕಟಶಿವಾರೆಡ್ಡಿ ಚಿಂತಾಮಣಿ ಮಾಜಿ ಶಾಸಕ ಜೆ.ಕೆ ಕೃಷ್ಣಾರೆಡ್ಡಿ ಬಿಜೆಪಿ ಮುಖಂಡ ವೇಣುಗೋಪಾಲ್ ಭಾಗವಹಿಸಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗಿ ಜನತೆ ಸಂತೃಪ್ತಿಯ ಜೀವನ ನಡೆಸುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂತೋಷ್,ಶ್ರೀನಿವಾಸ್,ಪ್ರಶಾಂತ್, ವೇಣು,ಶಿವರಾಜ್,ಶಿವಸಾಗರ್, ಶ್ರೀಕಾಂತ್, ಪವನ್, ಚಂದು, ಆಕಾಶ್, ಶಿವಾಜಿ,ಸುಮನ್ ಶೆಟ್ಟಿ.ಮಹೇಶ್ ಬೈ, ಗುಡೇ ಶ್ರೀನಿವಾಸ,ಮುಖಂಡರಾದ ಚಾಂದ್ ಪಾಷ,ಅಪ್ಸರ ಪಾಷಾ,ಯೂನಸ್ ಪಾಷಾ,ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



