ಬೆಂಗಳೂರು:ಕಲರ್ಸ್ ಕನ್ನಡ ವಾಹಿನಿಯಲ್ಲಿ ಖ್ಯಾತ ಚಲನಚಿತ್ರ ನಟ ಸುದೀಪ್ ಅವರು ನಿರೂಪಣೆ ಮಾಡುತ್ತಿರುವ ಬಿಗ್ ಬಾಸ್ ಸಿಸನ್ 11 ಶೊನಲ್ಲಿ ಸ್ವರ್ಗ-ನರಕದ ಪರಿಕಲ್ಪನೆ ಇದೆ ಇಲ್ಲಿ ಭಾಗವಹಿಸುತ್ತಿರುವ ಮಹಿಳೆಯರು ಮತ್ತು ಪುರುಷ ಸ್ಪರ್ಧಿಗಳನ್ನು ಜೈಲಿನ ರೂಪದಲ್ಲಿರುವ ಬಂಧಿಖಾನೆಯಂತಹ ಕೊಠಡಿಯಲ್ಲಿ ಅಕ್ರಮ ಬಂಧನದಲ್ಲಿ ಇರಿಸಿರುವಂತೆ ನೂರಾರು ಕ್ಯಾಮರಾಗಳಲ್ಲಿ ಚಿತ್ರಿಸಲಾಗುತ್ತಿದೆ ಇಲ್ಲಿ ನರಕದಲ್ಲಿರುವ ಸ್ಪರ್ಧಿಗಳಿಗೆ ಗಂಜಿಯನ್ನು ಮಾತ್ರ ಆಹಾರವಾಗಿ ನೀಡಲಾಗುತ್ತಿತ್ತು ಇದು ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ,
ಸ್ವರ್ಗದ ಸ್ಪರ್ಧಿಗಳು ಬಾತ್ರೂಮ್ಗೆ ಹೋಗಲು ಅನುಮತಿ ತೆಗೆದುಕೊಳ್ಳಬೇಕಾದ ಬಗ್ಗೆ ಶೋನಲ್ಲಿ ತೊರಿಸಲಾಗಿದ್ದು ಇದು ಶೌಚಾಲಯ ಉಪಯೋಗಿಸಲು ಬಲವಂತಕ್ಕೆ ಒಳಪಡಿಸದಂತಾಗುತ್ತದೆ ಇದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ದೈಹಿಕ ಭಾದೆ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಪಡೆದುಕೊಳ್ಳುವುದು ಮಹಿಳೆಯರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ, ಮತ್ತು ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸುವ ಹಕ್ಕನ್ನು ಹೊಂದಿರುವುದಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ರಾಮನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಬಿಗ್ ಬಾಸ್ ಶೋ ಚಿತ್ರಕರಣವಾಗುತ್ತಿರುವ ಜಾಗಕ್ಕೆ ತೆರಳಿ ಸಂಘಟಕರಿಗೆ ನೋಟಿಸ್ ನೀಡಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



