ನ್ಯೂಜ್ ಡೆಸ್ಕ್:ಗಂಟಲಲ್ಲಿ ದೋಸೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಆಶ್ಚರ್ಯಕರ ಘಟನೆ ತೆಲಂಗಾಣ ರಾಜ್ಯದ ನಾಗರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ನಡೆದಿದೆ. ಕಲ್ವಕುರ್ತಿಯ 41 ವರ್ಷದ ವೆಂಕಟಯ್ಯ ಎಂಬಾತನಿಗೆ ಮದ್ಯ ಸೇವಿಸುವ ಅಭ್ಯಾಸವಿದೆ ಎಂದಿನಂತೆ ಮದ್ಯ ಸೇವಿಸಿದ್ದಾನೆ ನಂತರ ಊಟಕ್ಕೆ ಕೂತಿದ್ದಾನೆ ಊಟಕ್ಕೆ ದೋಸೆ ಮಾಡಿದ್ದು ಅದನ್ನು ತಿನ್ನುವಾಗ ದೋಸೆ ಗಂಟಲಲ್ಲಿ ಸಿಕ್ಕಿಕೊಂಡಿದೆ ಉಸಿರಾಡಲು ಸಾಧ್ಯವಾಗಿಲ್ಲ. ಪ್ರಜ್ಞಾಹೀನನಾಗಿದ್ದಾನೆ ಕೂಡಲೇ ಸ್ಥಳಿಯ ಆಸ್ಪತ್ರೆಗೆ ಸಾಗಿಸಿರುತ್ತಾರೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೊನ್ನೆ ಕೇರಳದಲ್ಲಿ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿ ತಿನ್ನುವಾಗ ಉಸಿರುಗಟ್ಟಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ.ಮೃದುವಾದ ದೋಸೆ ಮತ್ತು ಇಡ್ಲಿ ತಿನ್ನುವಾಗ ಪ್ರಾಣಕ್ಕೆ ಸಂಚಕಾರ ತರುವುದು ಅಂದರೆ ಶಾಕಿಂಗ್ ವಿಚಾರ ಎನ್ನುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



