ನ್ಯೂಜ್ ಡೆಸ್ಕ್:ತೆಲಂಗಾಣ ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಆರೋಗ್ಯವಂತರಾಗಿ ಬದುಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಸಿಎಂ ರೇವಂತ್ ಪ್ರಧಾನಿಗೆ ಧನ್ಯವಾದ ತಿಳಿಸಿದ್ದಾರೆ.
ವಿದ್ಯಾರ್ಥಿ ದಸೆಯಿಂದ ಮುಖ್ಯಮಂತ್ರಿ ಸ್ಥಾನಕ್ಕೆ
ತೆಲಂಗಾಣದ ವಿಭಜಿತ ಮಹಬೂಬ್ ನಗರ ಜಿಲ್ಲೆಯಲ್ಲಿ ಸಿಎಂ ರೇವಂತ್ ರೆಡ್ಡಿ ಕಾಲೇಜು ದಿನಗಳಲ್ಲಿಯೇ ನಾಯಕರಾಗಿ ಹೊರಹೊಮ್ಮಿದ್ದರು. ನಂತರದಲ್ಲಿ ರಾಜಕೀಯ ಪ್ರವೇಶಿಸಿದ ಅವರಿಗೆ 2006 ರಲ್ಲಿ ಜಿಲ್ಲಾಪಂಚಾಯಿತಿ ಸ್ಥಾನಕ್ಕೆ ಸ್ಪರ್ದಿಸಲು ಯಾವ ಪಕ್ಷದವರು ಟಿಕೆಟ್ ನೀಡದ ಹಿನ್ನಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ZPTC ಸ್ಪರ್ದಿಸಿ ವಿಜೇತರಾದರು ನಂತರ 2007 ರಲ್ಲಿ MLC ಯಾಗಿ ಸಂಚಲನಾತ್ಮಕವಾಗಿ ಗೆಲವು ಸಾಧಿಸಿದರು ನಂತರ, ಅವರು ಚಂದ್ರಬಾಬು ನಾಯಕತ್ವ ಮೆಚ್ಚಿ ತೆಲಗುದೇಶಂ ಪಕ್ಷಕ್ಕೆ ಸೇರ್ಪಡೆಯಾದರು ಮತ್ತು ತೆಲಂಗಾಣ ಪಕ್ಷದ ಘಟಕದ ಅಧ್ಯಕ್ಷರಾದರು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ತೆಲಂಗಾಣ ರಾಜ್ಯ ಉದ್ಭವಾದ ನಂತರ ತಮ್ಮ ರಾಜಕೀಯ ಅಸ್ತಿತ್ವ ಉಳಸಿಕೊಳ್ಳಲು ಅವರು ಕಾಂಗ್ರೆಸ್ ಸೇರಿ ಟಿಪಿಸಿಸಿ ಅಧ್ಯಕ್ಷ ಸ್ಥಾನ ಪಡೆದರು. ತಮ್ಮ ನಿರಂತರ ರಾಜಕೀಯ ಪ್ರಯಾಣದಲ್ಲಿ ನೇರವಾಗಿ ಮಾತನಾಡಿದ್ದೆ ಹೆಚ್ಚು ಅವರ ನೇರಭಾಷಣಗಳಿಂದಲೆ ಕೆಸಿಆರ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಸಿಎಂ ಆಗಿರುವ ರೇವಂತ್ ರೆಡ್ಡಿ ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸುತ್ತಾ ಮುನ್ನಡೆಯುತ್ತಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



