ಚಿಂತಾಮಣಿ: ಕನ್ನಡ ಭಾಷೆ ಜೀವನದ ಭಾಷೆಯಾಗಬೇಕು ಇದಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಸದಾ ನೆರವಾಗುತ್ತದೆ ಗಡಿಭಾಗದ ಶಾಲೆಗಳಲ್ಲಿ ಕನ್ನಡ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಲ್ಲಿ ಮತ್ತು ಜನರಲ್ಲಿ ಕನ್ನಡ ಭಾಷೆಯ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಕಸಾಪ ಮಾಡುತ್ತಿದೆ ಎಂದು ಚಿಂತಾಮಣಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ವಿ. ಶ್ರೀನಿವಾಸನ್ ಹೇಳಿದರು.
ಅವರು ಗಂಜಿಗುಂಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಚಿಂತಾಮಣಿ ಗೆಳೆಯರ ಬಳಗದ ವತಿಯಿಂದ ಪ್ರತಿ ವರ್ಷದಂತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭವಿಷ್ಯಕ್ಕೆ ನೆರವು ನೀಡುವ ನಿಟ್ಟಿನಲ್ಲಿ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು.ಎಲ್ಲಾ ಭಾಷೆಗಳ ಬಗ್ಗೆ ಗೌರವ ಇರಲಿ ಆದರೆ ಬದುಕಿನ ಭಾಷೆ ಕನ್ನಡವನ್ನು ಪ್ರೀತಿಸಿ ಗೌರವಿಸಿ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರಭಾರಿ ಮುಖ್ಯಶಿಕ್ಷಕಿ ವಿ.ವೆಂಕಟರತ್ನಮ್ಮ ಮಾತನಾಡಿ ಮಕ್ಕಳಲ್ಲಿನ ಪ್ರತಿಭೆಯನ್ನು ಹೊರತೆಗೆಯಲು ಇದು ಉತ್ತಮವಾದ ಕಾರ್ಯಕ್ರಮವಾಗಿದೆ. ಇಂತಹ ಕಾರ್ಯಕ್ರಮಗಳನ್ನು ಗಡಿಭಾಗದಲ್ಲಿ ಆಯೋಜನೆ ಮಾಡುತ್ತಿರುವ ಚಿಂತಾಮಣಿ ಗೆಳೆಯರ ಬಳಗದ ಎಲ್ಲರಿಗೂ ಅಭಿನಂದನೆಗಳನ್ನು ಹೇಳಿದರು.
ಮಾಧ್ಯಮ ಪ್ರತಿನಿಧಿ ನೂರುಲ್ಲಾ ಮಾತನಾಡಿ ವಿದ್ಯಾರ್ಥಿಗಳೇ ಕನ್ನಡ ಮಣ್ಣಿನಲ್ಲಿ ಹುಟ್ಟಿ ಬದುಕು ಕಟ್ಟಿಕೊಂಡಿರುವ ನಾವು ಕನ್ನಡ ಭಾಷೆ ಬಳಕೆಗೆ ಹೆಚ್ಚು ಮಹತ್ವ ನೀಡಬೇಕು ನಾವೆಲ್ಲರು ಕನ್ನಡಾಭಿಮಾನಿಗಳು ಕನ್ನಡವನ್ನು ಪ್ರೀತಿಸ ಬೆಳಸಲು ಸಹಕಾರಿಯಾಗಬೇಕು ಎಂದರು.
ಕಾರ್ಯಕ್ರಮಮದಲ್ಲಿ ಚಿಂತಾಮಣಿ ಗೆಳೆಯರ ಬಳಗದ ಗೋಲ್ಡ್ ಕೃಷ್ಣ,ಮಹೇಶ್,ನಾಗಾರ್ಜುನ,ಪೃಥ್ವಿರಾಜು,ಕಸಾಪ ಪದಾಧಿಕಾರಿಗಳಾದ ಬೀರೇಗೌಡ,ನಾಗರಾಜು,ನಿವೃತ್ತ ಶಿಕ್ಷಕರಾದ ಮುನಿಶಾಮಿರೆಡ್ಡಿ ಪ್ರೌಢಶಾಲೆಯ ಶಿಕ್ಷಕರಾದ ಷಮಾತಾಜ್,ಜಗದೀಶ್, ಜಯಣ್ಣ,ನೇತ್ರಾವತಿ,ಕಾವ್ಯ ಗಾಯತ್ರಿ ಮುಂತಾದವರಿದ್ದರು ಈ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕ ವೃಂದವನ್ನು ಗೌರವಿಸಲಾಯಿತು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



