ಬೆಂಗಳೂರು:ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣ ರದ್ದುಕೋರಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,ಎಫ್ಐಆರ್ ರದ್ದುಪಡಿಸಲು ನಿರಾಕರಿಸಿದೆ. ಅಲ್ಲದೇ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣವನ್ನು ತನಿಖೆ ಮಾಡಲು ಆದೇಶಿಸಿದೆ. ಇದರಿಂದ ಕೋಲಾರ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರಿಗೆ ಸಂಕಷ್ಟ ಎದುರಾಗಿದೆ.
ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣ ಸಂಬಂಧ 2018ರಲ್ಲಿ ಫೋರ್ಜರಿ, ವಂಚನೆ, ಅಟ್ರಾಸಿಟಿ ಕಾಯ್ದೆಯಡಿ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿ,ಹೈಕೋರ್ಟ್, ಮಂಜುನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿತ್ತು.
ಈ ಪ್ರಕರಣವನ್ನು ರದ್ದುಕೋರಿ ಶಾಸಕ ಕೊತ್ತೂರು ಮಂಜುನಾಥ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಇಂದು (ಡಿಸೆಂಬರ್ 12) ವಿಚಾರಣೆ ನಡೆಸಿದ ಹೈಕೋರ್ಟ್, ಎಫ್ಐಆರ್ ರದ್ದುಪಡಿಸಲು ನಿರಾಕರಿಸಿ ಅರ್ಜಿಯನ್ನು ತಿರಸ್ಕರಿಸಿದಲ್ಲದೇ ಪ್ರಕರಣದ ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸೂಚಿಸಿದೆ.
ಪ್ರಕರಣದ ಹಿನ್ನೆಲೆ
ಪ್ರಕರಣದ ವಿವರ:ಪರಿಶಿಷ್ಟ ಜಾತಿಗಳ ಪಟ್ಟಿಗೆ ಬರುವ ಬುಡುಗ ಜಂಗಮ ಜಾತಿಗೆ ಸೇರಿದವರೆಂದು ಘೋಷಿಸಿಕೊಂಡು ಜಿ.ಮಂಜುನಾಥ್ ಅವರು 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಜೆಡಿಎಸ್ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಪರಿಶಿಷ್ಟ ಜಾತಿಗೆ ಸೇರಿರುವುದನ್ನು ಸಾಬೀತುಪಡಿಸಲು ವಿಫಲರಾದ ಹಿನ್ನೆಲೆಯಲ್ಲಿ ಅವರ ಆಯ್ಕೆಯನ್ನು ಹೈಕೋರ್ಟ್ 2018ರ ಏಪ್ರಿಲ್ನಲ್ಲಿ ಅಸಿಂಧುಗೊಳಿಸಿತ್ತು.ತೀರ್ಪಿನ ವಿರುದ್ಧ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್, ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನೆ ಸಮಿತಿ ಜಿ.ಮಂಜುನಾಥ್ ಅವರ ಜಾತಿಯನ್ನು ಪರಿಶೀಲಿಸಬೇಕು. ಸಮಿತಿಯ ನಿರ್ಣಯದ ಬಗ್ಗೆ ಆಕ್ಷೇಪವಿದ್ದರೆ ಪುನಃ ಅದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಬಹುದು ಎಂದು ಆದೇಶ ನೀಡಿತ್ತು. ಜಿ.ಮಂಜುನಾಥ್ ಅವರು ಬುಡುಗ ಜಂಗಮ ಜಾತಿಗೆ ಸೇರಿಲ್ಲ. ಅವರು ಬೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ನಿರ್ಣಯ ಕೈಗೊಂಡಿತ್ತು. ಬುಡುಗ ಜಂಗಮ ಪರಿಶಿಷ್ಟ ಜಾತಿಯಾದರೆ, ಬೈರಾಗಿ ಒಬಿಸಿ ಪ್ರವರ್ಗ-1ಕ್ಕೆ ಸೇರುತ್ತದೆ. ಸಮಿತಿಯ ನಿರ್ಣಯ ಕುರಿತಾಗಿ ಕೊತ್ತೂರುಮಂಜುನಾಥ್ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27