ಹಾಸನ :ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗಲು ವಿನೂತನ ಹಾಗು ಅಪಾಯಕಾರಿ ರೀಲ್ಸ್Reels ಮಾಡುವ ಹುಚ್ಚಿನಲ್ಲಿ ಬಿದ್ದಿರುವ ಕೆಲ ಯುವಕರು ಹುಚ್ಚಾಟದಿಂದ ತಮ್ಮ ಜೀವ ಕಳೆದುಕೊಳ್ಳುತ್ತಿದ್ದಾರೆ.
ಇಂತಹುದೆ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದ್ದು ರೀಲ್ಸ್ ಮಾಡಲು ಹೋಗಿ ಬೆಟ್ಟದ ಪ್ರಪಾತಕ್ಕೆ ಬಿದ್ದು ಯುವಕನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಗವಿಬೆಟ್ಟದಲ್ಲಿ ನಡೆದಿದೆ.ರಾಕಿದ್ (18) ಯುವಕ ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದ್ದು, ಶನಿವಾರಸಂತೆಯಿಂದ ತನ್ನ ಇಬ್ಬರು ಸ್ನೇಹಿತರೊಂದಿಗೆ ಸಕಲೇಶಪುರದ ಗವಿಬೆಟ್ಟಕ್ಕೆ ಬಂದಿದ್ದ ರಾಕಿದ್, ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುವಾಗ ಜಾರಿ ಬಿದ್ದಿರುತ್ತಾನೆ. ಪರಿಣಾಮ ಆತನ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.ಸ್ಥಳೀಯರು ಮತ್ತು ಯಸಳೂರು ಠಾಣೆ ಪೊಲೀಸರ ಸಹಾಯದಿಂದ ರಾಕಿದ್ ನನ್ನು ಮೇಲೆತ್ತಿ ತಕ್ಷಣವೇ ಶನಿವಾರಸಂತೆ ಅಸ್ಪತ್ರೆಗೆ ಕರೆದೊಯ್ಯಲಾಯಿತು ಅಲ್ಲಿನ ವೈದ್ಯರ ಸಲಹೆ ಮೇರೆಗೆ ಹಾಸನದ ಹಿಮ್ಸ್ಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ.ಯಸಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



