ಬೆಂಗಳೂರು:ಕಾಂಗ್ರೆಸ್ ಸಚಿವರೊಬ್ಬರ ಮೇಲೆ ಅರಣ್ಯ ಭೂಮಿ ಒತ್ತುವರಿ ಮಾಡಿರುವ ಬಗ್ಗೆ ಆರೋಪಿಸಿ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಲಾಗಿದೆ.
ಕಾರವಾರ ಜಿಲ್ಲೆಯ ಭಟ್ಕಳದ ಆರ್ಟಿಐ ಕಾರ್ಯಕರ್ತರಾದ ಶಂಕರ್ ನಾಯಕ್, ನಾಗೇಂದ್ರ ನಾಯಕ್ ಮತ್ತು ನಾಗೇಶ್ ನಾಯಕ್ ಅವರು ಉತ್ತರ ಕನ್ನಡ (uttara kannda) ಜಿಲ್ಲೆಯ ಉಸ್ತುವಾರಿ ಸಚಿವ ಹಾಗು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳು ವೈದ್ಯ ವಿರುದ್ಧ ರಾಜ್ಯಪಾಲರಿಗೆ ದಾಖಲಿಸಿದ್ದಾರೆ.
ಅರಣ್ಯ ಸಂರಕ್ಷಣಾಧಿಕಾರಿಗಳಿಗೂ ದೂರು ನೀಡಲಾಗಿದೆ. ಅಲ್ಲದೆ ಹೆಚ್ಚುವರಿಯಾಗಿ, ಕ್ರಮ ಕೈಗೊಳ್ಳುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ದೂರುದಾರರ ಪ್ರಕಾರ, ಸಚಿವ ಭಟ್ಕಳ ತಾಲೂಕಿನ ಬೈಲೂರಿನ ಸರ್ಕಾರಿ ಅರಣ್ಯ ಜಾಗದ ಸರ್ವೆ ನಂ- 600ರಲ್ಲಿ ಅಕ್ರಮವಾಗಿ ತಮ್ಮ ಬೀನಾ ವೈದ್ಯ ಶಿಕ್ಷಣ ಸಂಸ್ಥೆಗಾಗಿ ಅರಣ್ಯ ಭೂಮಿ ಒತ್ತುವರಿ ಮಾಡಿರುವುದಾಗಿ ಆರೋಪಿಸಲಾಗಿದೆ. ಮೇ 18, 2024 ರಂದು ಒತ್ತುವರಿ ಮಾಡಲಾಗಿದೆ ಎಂದು ದೂರಿನಲ್ಲಿ ವಿವರಿಸಿದ್ದು ದೂರು ದಾಖಲು ಮಾಡಲಾಗಿದ್ದರೂ, ಅರಣ್ಯ ಅಧಿಕಾರಿಗಳು ಸಚಿವ ವೈದ್ಯ ಅವರ ಹೆಸರನ್ನು ಬಿಟ್ಟು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸಚಿವ ವೈದ್ಯ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ ಪ್ರಕರಣದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ದೂರುದಾರರು ಆರೋಪ ವ್ಯಕ್ತಪಡಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



