ಚಿಂತಾಮಣಿ:ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸಜೀವವಾಗಿ ಸುಟ್ಟು ಕರಕಲರಾಗಿದ್ದು ಇತರೆ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಚಿಂತಾಮಣಿ-ಮದನಪಲ್ಲಿ ರಸ್ತೆಯಲ್ಲಿ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಲ್ಲಿ ಹಾಗು ಜೋಗ್ಯಾನಹಳ್ಳಿ ಗೆಟ್ ನಡುವೆ ಭಾನುವಾರ ನಡು ಮಧ್ಯಾನಃ ನಡೆದಿದೆ.
ಕಡಪಾದಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದ ಕುಟುಂಬ.
ಬೆಂಗಳೂರಿನಿಂದ ತಿರುಪತಿಗೆ ಹೋಗುವ ಖಾಸಗಿ ಬಸ್ ಭಾರತಿ ಸರ್ವಿಸ್ ಚಿಂತಾಮಣಿ-ಮದನಪಲ್ಲಿ ರಸ್ತೆಯಲ್ಲಿ ಎದುರಿಗೆ ಅತಿ ವೇಗವಾಗಿ ಬರುತ್ತಿದ್ದ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಹಳ್ಳಕ್ಕೆ ಉರಳಿ ಬಿದ್ದಿದೆ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿ ಏಕಾ ಏಕಿ ಬೆಂಕಿ ಹೊತ್ತಿಕೊಂಡಿದೆ ಇದರಿಂದಾಗಿ ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸಜೀವವಾಗಿ ಸುಟ್ಟುಹೋಗಿದ್ದಾರೆ.
ಅಪಘಾತದಲ್ಲಿ ಸಜೀವವಾಗಿ ಸುಟ್ಟು ಮೃತಪಟ್ಟವರನ್ನು ಆಂಧ್ರದ ಕಡಪ ಮೂಲದ ಧನಂಜಯರೆಡ್ಡಿ(45)ಅವರ ತಾಯಿ ಕಳಾವತಿ(62)ಎಂದು ಗುರುತಿಸಲಾಗಿದೆ.
ತೀವ್ರವಾಗಿ ಗಾಯಗೊಂಡಿರುವ ಶೋಭಾ(29 ವರ್ಷ)ಮಹಾಲಕ್ಷ್ಮಿ(60)ಮನ್ವಿತ್ (3ವರ್ಷ) ಸೇರಿದಂತೆ ಮೃತಪಟ್ಟ ಇಬ್ಬರು ಒಟ್ಟು ಐವರು ವ್ಯಕ್ತಿಗಳು ಒಂದೇ ಕುಟುಂಬದವರಾಗಿದ್ದು ಇವರೆಲ್ಲರೂ ಬೆಂಗಳೂರಿನಲ್ಲಿ ವಾಸವಿದ್ದು ಊರಿಗೆ ಬಂದಿದ್ದು ವಾಪಸ್ಸು ಬೆಂಗಳೂರಿಗೆ ಹೋಗುವಾಗ ಅಪಘಾತ ಆಗಿದೆ.
ಘಟನೆ ಮಾಹಿತಿ ತಿಳಿದ ತಕ್ಷಣ ಜಿಲ್ಲಾ ರಕ್ಷಣಾಧಿಕಾರಿ ಕುಶಾಲ್ ಚೌಕ್ಸೆ,ಅಡಿಷನಲ್ ಎಸ್ಪಿ ರಜಾ ಇಮಾಮ್ ಖಾಸಿಂ,ಚಿಂತಾಮಣಿ ಡಿವೈಎಸ್ಪಿ ಮುರಳಿಧರ್,ಸರ್ಕಲ್ ಇನ್ಸ್ಪೆಕ್ಟರ್ ವೆಂಕಟರವಣಪ್ಪ,ಸಬ್ ಇನ್ಸ್ಪೆಕ್ಟರ್ ಶಿವರಾಜ್, ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26