ನ್ಯೂಜ್ ಡೆಸ್ಕ್:ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದು ಕರ್ನಾಟಕದ ಮಾವು ಬೆಳೆಗಾರರು ಎದರಿಸುತ್ತಿರುವ ಸಮಸ್ಯೆಗಳನ್ನು ಮತ್ತು ಪಡುತ್ತಿರುವ ತೊಂದರೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.
ನಿಮ್ಮ ಅಧಿಕಾರಿಗಳು ತೆಗೆದುಕೊಳ್ಳುತ್ತಿರುವ ನಿರ್ಧಾರಗಳಿಂದಾಗಿ ನಮ್ಮ ರಾಜ್ಯದ ಮಾವಿನ ರೈತರು ಇನ್ನಿಲ್ಲದಂತೆ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿರುವ ಅವರು ಕರ್ನಾಟಕದಲ್ಲಿ ಬೆಳೆದ ತೋತಾಪುರಿ ಮಾವಿನ ಹಣ್ಣುಗಳನ್ನು ಚಿತ್ತೂರು ಜಿಲ್ಲೆಯ ತಿರಳು ಫ್ಯಾಕ್ಟರಿಗಳಿಗೆ ಮಾರಾಟ ಮಾಡುವುದು ಮೊದಲಿನಿಂದಲು ಬಂದಿರುವ ಸಂಪ್ರದಾಯ ಎಂದು ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು ಚಿತ್ತೂರು ಜಿಲ್ಲಾಧಿಕಾರಿ ಕರ್ನಾಟಕದಿಂದಿಂದ ಬರುವ ಮಾವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ ಇದರೊಂದಿಗೆ ಆಂಧ್ರದ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಮತ್ತು ಮಾರುಕಟ್ಟೆ ಇಲಾಖೆಗಳ ಅಧಿಕಾರಿಗಳ ಸಮೂಹ ಕರ್ನಾಟಕ-ಆಂಧ್ರದ ಗಡಿಯಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಿ ತಪಾಸಣೆ ಮಾಡುತ್ತಿದ್ದಾರೆ ಎಂದು ವಿವರಿಸಿರುವ ಸಿದ್ದರಾಮಯ್ಯನವರು ಇದರಿಂದ ಕರ್ನಾಟಕದ ಮಾವಿನ ರೈತರಿಗೆ ತೊಂದರೆಯಾಗಿದೆ, ನಮ್ಮ ಕರ್ನಾಟಕ ರಾಜ್ಯದ ರೈತರು ಬಹಳ ವರ್ಷಗಳಿಂದ ಸೌಹಾರ್ದತೆಯಿಂದ ಚಿತ್ತೂರು ಜಿಲ್ಲೆಯ ಸಂಸ್ಕರಣ ಘಟಕಗಳಿಗೆ ಮತ್ತು ತಿರುಳು ಕೇಂದ್ರಗಳಿಗೆ ಮಾವಿನ ಹಣ್ಣುಗಳನ್ನು ಪೂರೈಸುತ್ತಿದ್ದಾರೆ ಇತ್ತೀಚೆಗೆ ವಿಧಿಸಲಾದ ನಿಷೇಧದಿಂದಾಗಿ ಅವರು ತೊಂದರೆಗಳನ್ನು ಅನುಭವಿಸುವಂತಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಬೆಳವಣಿಗೆಗಳು ಎರಡು ರಾಜ್ಯಗಳ ನಡುವಿನ ಸೌಹಾರ್ದತೆಗೆ ಧಕ್ಕೆ ತರುವಂತ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.
ಈ ನಿಷೇಧವು ಎರಡು ರಾಜ್ಯಗಳ ನಡುವಿನ ದೀರ್ಘಕಾಲೀನ ಸಹಕಾರ ಮತ್ತು ಒಕ್ಕೂಟ ವ್ಯವಸ್ಥೆಗೆ ಕೊಡಲಿ ಪೆಟ್ಟು ಬೀಳಬಹುದು, ಎರಡು ರಾಜ್ಯಗಳ ನಡುವೆ ಪರಸ್ಪರ ಸಹಕಾರ ಅಗತ್ಯ ಎಂದು ಅವರು ಪ್ರಸ್ಥಾಪಿಸಿದ್ದಾರೆ ಯಾರೊಂದಿಗೂ ಸಮಾಲೋಚಿಸದೆ ನಿಷೇಧ ಹೇರಲಾಗಿದೆ ಎಂದಿರುವ ಸಿದ್ದರಾಮಯ್ಯ ಮಾವಿನ ಸಾಗಣೆಕೆಯ ಮೇಲಿನ ನಿಷೇಧಕ್ಕೆ ಪ್ರತಿಕ್ರಿಯೆಯಾಗಿ ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಬರುವಂತ ತರಕಾರಿಗಳು ಮತ್ತು ಇತರೆ ಕೃಷಿ ಉತ್ಪನ್ನಗಳ ಮೇಲೆ ನಿಷೇಧ ಹೇರಬೇಕೆಂದು ಈಗಾಗಲೇ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿರುವ ಸಿದ್ದರಾಮಯ್ಯ ಅಂತಹ ಪರಿಸ್ಥಿತಿ ಉದ್ಭವಿಸುವುದನ್ನು ನಾನು ಬಯಸುವುದಿಲ್ಲ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಅವರು ಆಂಧ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



