ಬೆಂಗಳೂರು:ಬೆಂಗಳೂರು ನಗರದಲ್ಲಿ ಪೇಯಿಂಗ್ ಗೆಸ್ಟ್ (ಪಿಜಿ) ಮಾಲಿಕ ಎಸಗಿರುವ ಮೃಗಿಯ ಕೃತ್ಯ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿಯ ಖಾಸಗಿ ಕಾಲೇಜಿನ ಕೇರಳದ ಯುವತಿ 10 ದಿನಗಳ ಹಿಂದೆಯಷ್ಟೇ ಆರೋಪಿ ಅಶ್ರಫ್ ಒಡೆತನದ ಪಿ.ಜಿಗೆ ದಾಖಲಾಗಿದ್ದಳು.ಪಿಜಿ ಮಾಲಿಕ ಅಶ್ರಫ್ ಶುಕ್ರವಾರ ರಾತ್ರಿ ನನ್ನನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯಿದು ದೌರ್ಜನ್ಯವೆಸಗಿದ್ದ. ನಂತರ ನನ್ನನ್ನು ಪೇಯಿಂಗ್ ಗೆಸ್ಟ್ಗೆ ವಾಪಸ್ ಕರೆತಂದು ಬಿಟ್ಟಿದ್ದ ಎಂದು ಸಂತ್ರಸ್ತೆ ಪೋಲಿಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾಳೆ.
ಕೃತ್ಯಕ್ಕೂ ಮೊದಲು ಹಲ್ಲೆ ಮಾಡಿದ್ದ ಅತ್ಯಾಚಾರ ಎಸಗಲು ಪ್ರಯತ್ನಿಸಿದಾಗ, ವಿರೋಧಿಸಿದ್ದಕ್ಕೆ ಮತ್ತೆ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಯುವತಿ ದೂರಿದ್ದಾಳೆ.
ಯುವತಿ ನೀಡಿರುವ ದೂರಿನ ಪ್ರಕಾರ, ಪ್ರಕರಣ ದಾಖಲಿಸಿಕೊಂಡ ಸೋಲದೇವನಹಳ್ಳಿ ಪೊಲೀಸರು ಆರೋಪಿ, ಪಿಜಿ ಮಾಲೀಕ ಅಶ್ರಫ್ ನನ್ನು ಇಂದು (ಭಾನುವಾರ) ಬಂಧಿಸಿದ್ದಾರೆ. ಪ್ರಕರಣದ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಿಂದ ಆಘಾತಕ್ಕೊಳಗಾಗಿದ್ದ ಸಂತ್ರಸ್ತೆ ಸ್ನೇಹಿತರ ಸಹಾಯದಿಂದ ಸೋಲದೇವನಹಳ್ಳಿ ಠಾಣೆಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



