ಚಿಂತಾಮಣಿ:ಕರ್ನಾಟಕ ಪುರಸಭೆ ಕಾಯ್ದೆಯಂತೆ ಚಿಂತಾಮಣಿ ತಾಲ್ಲೂಕಿನ ಕೈವಾರ ಮತ್ತು ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಒಗ್ಗೂಡಿಸಿ ಮೇಲ್ದರ್ಜೆಗೇರಿಸಲಾಗಿದ್ದು ಮುಂದೆ ಅದನ್ನು ಕೈವಾರ ಪಟ್ಟಣ ಪಂಚಾಯತಿ ಪ್ರದೇಶ ಎಂದು ಸರ್ಕಾರ ಘೋಷಣೆ ಮಾಡಿದೆ.
ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಚಿಂತಾಮಣಿ ತಾಲ್ಲೂಕಿನ ಕೈವಾರ ತಾತಯ್ಯನವರ ಪವಿತ್ರ ಯಾತ್ರಾಸ್ಥಳವಾದ ಕೈವಾರ ಪಂಚಾಯಿತಿ ಮತ್ತು ಕೈಗಾರಿಕಾ ಪ್ರದೇಶ ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಕಲಂ-3, 4, 9, 349, 350, 351 ಮತ್ತು 355 ರನ್ವಯ ಶೆಡ್ಯೂಲ್-ಎ ರಲ್ಲಿ ಒಳಗೊಂಡ ಪ್ರದೇಶ ಹಾಗೂ ಶೆಡ್ಯೂಲ್-ಬಿ ರಲ್ಲಿ ಆ ಪ್ರದೇಶದ ಗಡಿರೇಖೆ ಗುರುತಿಸಲಾಗಿರುವಂತೆ ಮೇಲ್ದರ್ಜೆಗೆ ಏರಿಸಿ ಕೈವಾರ ಪಟ್ಟಣ ಪಂಚಾಯತಿ ಎಂದು ಘೋಷಿಸಲಾಗಿದೆ.
ಗ್ರಾಮಸ್ಥರ ಸಂಭ್ರಮಾಚರಣೆ
ಕೈವಾರ ಪಂಚಾಯಿತಿ ಮತ್ತು ಕೈಗಾರಿಕಾ ಪ್ರದೇಶ ಮಸ್ತೇನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೆ ಏರಿಸಿ ಕೈವಾರ ಪಟ್ಟಣ ಪಂಚಾಯತಿ ಎಂದು ಘೋಷಣೆ ಮಾಡಿದ ಹಿನ್ನಲೆಯಲ್ಲಿ ಕೈವಾರ ಗ್ರಾಮಸ್ಥರು ಕಾಲಜ್ಞಾನಿ ಕೈವಾರ ತಾತಯ್ಯನವರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



