ಬೆಂಗಳೂರು:ಬೆಂಗಳೂರಿನ ಹೆಬ್ಬಾಳದ ನೂತನ flyover ಮೇಲುಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಹಾಗು ಡಿ.ಸಿ.ಎಂ ಶಿವಕುಮಾರ್ ಇಂದು ಉದ್ಘಾಟಿಸಿದ್ದಾರೆ.
ಇಂದು ಹೆಬ್ಬಾಳ ಮೇಲು ಸೇತುವೆಯನ್ನು ಉದ್ಘಾಟಿಸಿ ಲೋಕಾರ್ಪಣೆ ಮಾಡಲಾಗಿದ್ದು ಈಗಾಗಲೇ 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ ವಾಹನಗಳು ಸಿಗ್ನಲ್ ತಪ್ಪಿಸಿ ರ್ಯಾಂಪ್ ಮೂಲಕ ಸುಲಭವಾಗಿ ಹೋಗಲು ಸಹಾಯ ಮಾಡುತ್ತದೆ. ಆದರೆ, ಇದರಿಂದ ಮೆಖ್ರಿ ವೃತ್ತದಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಬಹುದು ಎಂದು ಟ್ರಯಲ್ ರನ್ ನಲ್ಲಿ ತಿಳಿದುಬಂದಿದೆ.
700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ ಮೇಖ್ರೀ ವೃತ್ತದವರಿಗೆ ನಿರ್ಮಾಣ ಮಾಡಲಾಗಿದ್ದು.ಇದರ ಕಾಮಗಾರಿ 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ.
ಡಿ.ಸಿ.ಎಂ ಶಿವಕುಮಾರ್ ಯಜ್ಡಿ ರೈಡ್
ಬೆಂಗಳೂರಿನ ನೂತನ ಹೆಬ್ಬಾಳ್ ಫ್ಲೈಓವರ್ ಉದ್ಘಾಟಿಸಲಾಗಿದ್ದು, ಈ ವೇಳೆ ಡಿಸಿಎಂ ಶಿವಕುಮಾರ್ ಅವರು ರೋಡ್ಕಿಂಗ್ ಯಜ್ಡಿ ರೈಡ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆಶಿ, ಹೆಬ್ಬಾಳ ಮೇಲು ಸೇತುವೆಯಲ್ಲಿ ಯೆಜ್ಡಿ ರೋಡ್ಕಿಂಗ್ ಬೈಕ್ ಸವಾರಿ ಮಾಡುವ ಮೂಲಕ ಕಾಲೇಜು ದಿನಗಳನ್ನು ಮೆಲುಕು ಹಾಕಿದ್ದಾರೆ. ಬೆಂಗಳೂರಿನ ನಾಗರಿಕರೇ, ಜಾಗತಿಕವಾಗಿ ಗುರುತಿಸಿಕೊಂಡಿರುವ ನಮ್ಮ ಬೆಂಗಳೂರು ನಗರಕ್ಕೆ ಹೊಸರೂಪವನ್ನು ನೀಡಲು ನಾವು ಬದ್ಧರಿದ್ದೇವೆ ಎಂದಿರುತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



