ಶ್ರೀನಿವಾಸಪುರ:ವಿದ್ಯಾರ್ಥಿಗಳ ಕೊರತೆ ಶಿಥಲವಾದ ಕಟ್ಟಡಗಳು ಸಾರಿಗೆ ವ್ಯವಸ್ಥೆ ಕೊರತೆ ಹೀಗೆ ನಾನಾ ರಿತಿಯ ಸಮಸ್ಯೆಗಳಿಂದ ಇಂದು ದೊಡ್ದ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ.
ಆದರೆ ಇಲ್ಲೊಂದು ಸರ್ಕಾರಿ ಶಾಲೆ ಇವೆಲ್ಲದಕ್ಕೂ ಭಿನ್ನ ಎನ್ನುವಂತೆ ಪುಟ್ಟ ಗ್ರಾಮ ಕಶೆಟ್ಟಿಹಳ್ಳಿಯ ಉನ್ನತೀಕೃತ ಸರ್ಕಾರಿ ಶಾಲೆಯಲ್ಲಿ ಭರ್ಜರಿ ನೂರ ಇಪತ್ತು ವಿಧ್ಯಾರ್ಥಿಗಳ ಸಂಖ್ಯೆ ಹೊಂದಿದ್ದು ಇಂತಹ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಅಡ್ಡಗಾಲು ಹಾಕಲು ಸ್ಥಳೀಯವಾಗಿ ಷಡ್ಯಂತರ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.
ಇಂದು ಶಾಲ ವಿದ್ಯಾರ್ಥಿಗಳು ಗ್ರಾಮಸ್ಥರು ಶಾಲ ಆವರಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿರುವ ಪಟ್ಟಬದ್ರರಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಪ್ರಗತಿ ಪರ ರೈತ ರಾಮಚಂದ್ರಾರೆಡ್ಡಿ ಹಲವಾರು ವರ್ಷಗಳಿಂದ ಉತ್ತಮವಾಗಿ ಯಾವುದೆ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ಪಾರಂಪರಿಕವಾಗಿ ನಡೆದುಕೊಂಡು ಬರುತ್ತಿರುವ ಕಶೆಟ್ಟಿಹಳ್ಳಿ ಸರ್ಕಾರಿ ಶಾಲೆಯನ್ನು ಕೆಲ ಪಟ್ಟಬದ್ರರು ತಮ್ಮ ಬೆಳೆ ಬೆಯಿಸಿಕೊಳ್ಳುವ ಸಲುವಾಗಿ ಇಲ್ಲಿನ ಶಿಕ್ಷಕರ ವಿರುದ್ದ ಇಲ್ಲಸಲ್ಲದ ಸಬೂಬು ಹೇಳಿ ವರ್ಗಾವಣೆ ಮಾಡಿಸುವ ಕೆಲಸ ಮಾಡುತ್ತಿದ್ದಾರೆ ಇದಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳ ಕುಮ್ಮಕ್ಕು ಇದೆ ಇದರಿಂದಾಗಿ ನಮ್ಮೂರಿನ ವಿದ್ಯಾರ್ಥಿಗಳಿಗೆ ಉತ್ತಮ ಪಾಠ ಪ್ರವಚನ ಸಿಗದಂತೆ ಮಾಡುವ ಮೂಲಕ ನಮ್ಮೂರಿನ ಶಾಲೆ ಅಭಿವೃದ್ಧಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ದೂರಿದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



