ನ್ಯೂಜ್ ಡೆಸ್ಕ್:ರಾಜ್ಯದಲ್ಲಿ ಮಳೆಯ ಆರ್ಭಟ ಇನ್ನೂ ಮುಂದುವರೆಯಲಿದೆ ಮುಂದಿನ 10 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನಾಳೆ ಭಾರಿ ಮಳೆ ಸಾಧ್ಯತೆ
ಮುಂದಿನ 10 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ 7 ಜಿಲ್ಲೆಗಳಾದ ದಕ್ಷಿಣ ಒಳನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.24 ಜಿಲ್ಲೆಗಳಲ್ಲಿ ಸಾಧಾರಾಣ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಇರಲಿದೆ ಎನ್ನುತ್ತಾರೆ.
ರಾಜ್ಯದಲ್ಲಿ ಮಳೆ ಮತ್ತಷ್ಟು ದಿನ ಮಳೆ ಮುಂದುವರೆಯಲಿದೆ. ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದು, ಚಾಮರಾಜನಗರದಲ್ಲೂ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಲ್ಲಿ ಗಾಳಿ ಮಳೆ ಸಾಧ್ಯತೆ
ರಾಜಧಾನಿ ಬೆಂಗಳೂರಲ್ಲಿ ನಾಳೆ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶೇಕಡಾ 86ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾವಾನ ಇಲಾಖೆ ತಿಳಿಸಿದೆ.
ಕೋಲಾರ ಭಾಗದಲ್ಲಿ ಸಣ್ಣ ಪ್ರಮಾಣದ ಮಳೆ
ಕೋಲಾರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ,ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎನ್ನಲಾಗಿದೆ.
ಇದನ್ನು ಓದಿ



