ಕೋಲಾರ:ರಾಜ್ಯ ಸರ್ಕಾರ ಕರ್ನಾಟಕ ಆಡಳಿತ ಸೇವೆಯ (ಕೆಎಎಸ್-ಕಿರಿಯ ಶ್ರೇಣಿ) ಇಬ್ಬರು ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ಡಿಪಿಎಆರ್) ಈ ಕುರಿತು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ನ ವಿಶೇಷ ಭೂಸ್ವಾಧೀನಾಧಿಕಾರಿ-09 ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಜಂಬಗಿ ರೇಣುಕಾಪ್ರಸಾದ್ ದಿಲೀಪ್ ಅವರನ್ನು ಕೋಲಾರ ಉಪ ವಿಭಾಗಾಧಿಕಾರಿಯನ್ನಾಗಿ(AC) ನೇಮಕ ಮಾಡಲಾಗಿದೆ. ಕೋಲಾರ ಎಸಿಯಾಗಿದ್ದ ಡಾ. ಮೈತ್ರಿ ಹೆಚ್.ಪಿ.ಎಸ್. ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ರೇಣುಕಾಪ್ರಸಾದ್ ಅವರನ್ನು ನಿಯೋಜಿಸಲಾಗಿದೆ.
ಈ ಆದೇಶದ ಅನ್ವಯ, ಸ್ಥಳ ನಿರೀಕ್ಷಣೆಯಲ್ಲಿರುವ ಅಧಿಕಾರಿಗಳಿಗೆ ತಕ್ಷಣವೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಥವಾ ತಮ್ಮ ಮಾತೃ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



