ಶ್ರೀನಿವಾಸಪುರ:ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬೊಲೇರೋ ಅತಿ ವೇಗವಾಗಿ ಚಾಲನೆಯಿಂದ ವಾಹನ ರೈಲ್ವೆ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಮುಗುಚಿ ಬಿದ್ದು ವಾಹನದಲ್ಲಿದ್ದ ಮೂವರು ಕಾರ್ಮಿಕರು ಮೃತಪಟ್ಟು, 10 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಶ್ರೀನಿವಾಸಪುರ ತಾಲೂಕಿನ ದೊಡಮಲದೊಡ್ಡಿ ರೈಲ್ವೆ ಬ್ರಿಡ್ಜ್ ಬಳಿ ಘಟನೆ ಜರುಗಿದ್ದು, ಆಂದ್ರದ ಚೆಂಬಕೂರು ಗ್ರಾಮದ ಕೂಲಿ ಕಾರ್ಮಿಕರಾದ ವೆಂಕಟಮ್ಮ (55), ಮುನಿಯಪ್ಪ (56) ಶ್ರೀನಿವಾಸ@ಸೀನು (27) ಎಂಬುವರು ಮೃತಪಟ್ಟಿದ್ದಾರೆ.
ಚೆಂಬಕೂರಿನಿಂದ ಹುಣಸೆ ಮರದಲ್ಲಿ ಕಾಯಿ ಉದುರಿಸುವ ಕೆಲಸಕ್ಕೆ 12 ಮಂದಿ ಕೂಲಿ ಕಾರ್ಮಿಕರನ್ನು ಶ್ರೀನಿವಾಸಪುರ-ಚಿಂತಾಮಣಿ ನಡುವಿನ ಆನೂರು ಗ್ರಾಮಕ್ಕೆ ಕರೆತಂದಿದ್ದರು, ಕೆಲಸ ಮುಗಿಸಿದ ಕೂಲಿ ಕಾರ್ಮಿಕರನ್ನು ಅವರ ಊರಾದ ಆಂಧ್ರದ ಚಂಬಕೂರಿಗೆ ಮತ್ತೆ ಬೊಲೆರೋ ವಾಹನದಲ್ಲಿ ಸಂಜೆ ವಾಪಸ್ ಕರೆದುಕೊಂಡು ಹೋಗುತ್ತಿರುವಾಗ ದೊಡಮದೊಡ್ಡಿ ಸಮೀಪದ ರೈಲ್ವೆ ಅಂಡರ್ ಬ್ರಿಡ್ಜ್ ಬಳಿ ವಾಹನ ಅತಿ ವೇಗವಾಗಿ ಚಲಾಯಿಸುತ್ತಿದ್ದದ್ದರಿಂದ ಬ್ರೇಕ್ ಫೈಲೂರ್ ಆಗಿ ಚಾಲಕನ ನಿಯಂತ್ರಣ ತಪ್ಪಿದ್ದು ಬೊಲೆರೋ ರಸ್ತೆ ಮೇಲೆ ಮುಗಿಚಿ ಬಿದಿದ್ದೆ. ಬಿದ್ದ ರಭಸಕ್ಕೆ ವಾಹನದಲ್ಲಿದ್ದ ಕಾರ್ಮಿಕರಲ್ಲಿ ಮೂವರು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಉಳಿದವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಶ್ರೀನಿವಾಸಪುರ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಅಪಘಾತ ದಾಖಲಿಸಿಕೊಂಡಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



