ಶ್ರೀನಿವಾಸಪುರ :ರಾತ್ರಿ ಗಸ್ತು ನಿರ್ವಹಿಸುತ್ತಿದ್ದ ಶ್ರೀನಿವಾಸಪುರ ಪೋಲಿಸ್ ಠಾಣೆ ಪೊಲೀಸ್ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಸಾವನಪ್ಪಿರುವ ಧಾರುಣ ಘಟನೆ ಶ್ರೀನಿವಾಸಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.ಶ್ರೀನಿವಾಸಪುರ-ಕೋಲಾರ ರಾಜ್ಯ ಹೆದ್ದಾರಿಯ ಪಣಸಮಾಕಲಹಳ್ಳಿ ಬಳಿ ಘಟನೆ ನಡೆದಿದ್ದು ಮೃತರನ್ನು ಆನಂದ್ ಬಾಬು (45) ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದೂವರೆ ವರ್ಷದಿಂದ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆನಂದ್ ಬಾಬು ಎಂದಿನಂತೆ ತಮ್ಮ ದ್ವಿಚಕ್ರ ವಾಹನದಲ್ಲಿ ರಾತ್ರಿ ಗಸ್ತು ನಿರ್ವಹಿಸುತ್ತ ಪಣಸಮಾಕಲಹಳ್ಳಿ ಬಳಿ ಹೋಗುತ್ತಿದ್ದಾಗ ಕೋಲಾರದ ಕಡೆಯಿಂದ ಅತಿ ವೇಗ ಹಾಗು ಅಜಾಗುರವಾಗಿ ಬಂದಂತ ಬೊಲೆರೋ ವಾಹನ ಇವರ ಬೈಕ್ಗೆ ಬಲವಾಗಿ ಡಿಕ್ಕಿ ಹೊಡೆದು ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದೆ ಪಕ್ಕದ ಹಳ್ಳಕ್ಕೆ ಬಿದ್ದಿದೆ. ಅಪಘಾತದ ತೀವ್ರತೆ ಎಷ್ಟಿತ್ತು ಎಂದರೆ ಬೊಲೆರೋ ವೇಗಕ್ಕೆ ಆನಂದ್ ಬಾಬು ಸ್ಥಳದಲ್ಲೇ ಮೃತಪಟ್ಟರೆ ರಸ್ತೆ ಬದಿ ವಿದ್ಯತ್ ಕಂಬಗಳು ಸಂಪೂರ್ಣ ಧರೆಗೆ ಉರಳಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ವಾಹನ ಮತ್ತು ಚಾಲಕನ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.ಮೃತ ಪೋಲಿಸ್ ಪೇದೆ ಮೂಲತಃ ಕೋಲಾರದವರಾಗಿದ್ದು ಶ್ರೀನಿವಾಸಪುರ ತಾಲೂಕಿನ ಶೀಗಹಳ್ಳಿ ಗ್ರಾಮದ ಅಳಿಯ ಎಂದು ಹೇಳಲಾಗಿದೆ. ನಿಷ್ಠಾವಂತ ಅಧಿಕಾರಿಯನ್ನು ಕಳೆದುಕೊಂಡ ಶ್ರೀನಿವಾಸಪುರ ಪೊಲೀಸ್ ಇಲಾಖೆಯ ಸಹೋದ್ಯೋಗಿಗಳು ಮತ್ತು ಕುಟುಂಬಸ್ಥರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



