ನ್ಯೂಜ್ ಡೆಸ್ಕ್: ಹಾರ್ಮುಝ್ ಜಲಸಂಧಿಯಲ್ಲಿ ಶನಿವಾರ ಭಾರತೀಯ ಧ್ವಜ ಹೊತ್ತ ಹಡಗಿನ ಮೇಲೆ ಇರಾನ್ ಪಡೆಗಳು ಗುಂಡಿನ ದಾಳಿ ನಡೆಸಿದ ಘಟನೆಯನ್ನು ಭಾರತ ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಭಾರತವು ಇರಾನ್ ರಾಯಭಾರಿ ಡಾ. ಮೊಹಮ್ಮದ್ ಫಥಾಲಿ ಅವರನ್ನು ಕರೆಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಹಾರ್ಮುಝ್ ಜಲಸಂಧಿಯಲ್ಲಿ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಈ ರಾಜತಾಂತ್ರಿಕ ಕ್ರಮ ಕೈಗೊಳ್ಳಲಾಗಿದೆ. ಸರಕಾರಿ ಮೂಲಗಳು ಹೇಳಿವೆ. ಅಂತರಾಷ್ಟ್ರೀಯ ಜಲಮಾರ್ಗದಲ್ಲಿ ಭಾರತೀಯ ನಾವಿಕರ ಮತ್ತು ಹಡಗುಗಳ ಸುರಕ್ಷತೆಯ ಬಗ್ಗೆ ಭಾರತವು ತನ್ನ ಕಳವಳವನ್ನು ಇರಾನ್ ಮುಂದೆ ಸ್ಪಷ್ಟವಾಗಿ ಮಂಡಿಸಿದೆ.
ಭಾರತೀಯ ಹಡಗುಗಳ ಮೇಲೆ ನಡೆದ ಈ ದಾಳಿ ರಾಜತಾಂತ್ರಿಕ ವಲಯದಲ್ಲಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಇರಾನ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಭಾರತದೊಂದಿಗಿನ ಇರಾನ್ನ ಸಂಬಂಧವು ಅತ್ಯಂತ ಗಟ್ಟಿಯಾಗಿದೆ ಮತ್ತು ಈ ಸಣ್ಣ ಘಟನೆಯಿಂದ ಸಂಬಂಧದಲ್ಲಿ ಯಾವುದೇ ಬಿರುಕು ಮೂಡುವುದಿಲ್ಲ ಎಂದು ಇರಾನ್ ರಾಯಭಾರಿ ಹೇಳಿದೆ ಹಡಗುಗಳ ಮೇಲೆ ನಡೆಸಲಾದ ಗುಂಡಿನ ದಾಳಿಯು ಕೇವಲ ಎಚ್ಚರಿಕೆಯ ಕ್ರಮವಾಗಿತ್ತು ಮತ್ತು ಯಾವುದೇ ಹಡಗನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಹಾನಿ ಮಾಡುವ ಉದ್ದೇಶ ಇರಾನ್ ಪಡೆಗಳಿಗೆ ಇರಲಿಲ್ಲ ಎಂದು ಅವರು ಸಮರ್ಥಿಸಿಕೊಂಡಿದೆ.
ಇರಾನ್ ನೀಡಿದ ಮಾಹಿತಿಯ ಪ್ರಕಾರ, ಆ ಹಡಗುಗಳು ತೈಲ ಕಳ್ಳಸಾಗಣೆಯಲ್ಲಿ ತೊಡಗಿರುವ ಶಂಕೆ ಅಥವಾ ಸಮುದ್ರ ಸಂಚಾರಿ ನಿಯಮಗಳ ಉಲ್ಲಂಘನೆ ಮಾಡಿರಬಹುದು ಎಂಬ ಕಾರಣಕ್ಕೆ ಈ ಎಚ್ಚರಿಕೆಯ ದಾಳಿ ನಡೆಸಲಾಗಿತ್ತು. ಸಮುದ್ರದ ಹಿತದೃಷ್ಟಿಯಿಂದ ಇಂತಹ ಕ್ರಮಗಳು ಅನಿವಾರ್ಯ ಎಂದು ಇರಾನ್ ಅಧಿಕಾರಿಗಳು ಹೇಳಿಕೊಂಡಿದ್ದಾರೆ. ಆದಾಗ್ಯೂ, ಭಾರತವು ತನ್ನ ಪ್ರಜೆಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಇರಾನ್ಗೆ ಸೂಚಿಸಿದೆ.
ಹಾರ್ಮುಝ್ ಜಲಸಂಧಿಯು ಜಾಗತಿಕ ಇಂಧನ ಪೂರೈಕೆಯ ಪ್ರಮುಖ ಕೊಂಡಿಯಾಗಿದ್ದು, ಈ ಮಾರ್ಗದಲ್ಲಿ ಶಾಂತಿ ಮತ್ತು ಭದ್ರತೆ ಕಾಪಾಡುವುದು ಭಾರತ ಮತ್ತು ಇರಾನ್ ಎರಡೂ ದೇಶಗಳಿಗೆ ಆಯಕಟ್ಟಿನ ದೃಷ್ಟಿಯಿಂದ ಮಹತ್ವದ್ದಾಗಿದೆ. ಸದ್ಯ ಎರಡೂ ರಾಷ್ಟ್ರಗಳು ಮಾತುಕತೆಯ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದು, ದ್ವಿಪಕ್ಷೀಯ ಸಹಕಾರವನ್ನು ಮುಂದುವರಿಸಲು ನಿರ್ಧರಿಸಿವೆ. ಈ ಘಟನೆಯು ಉಭಯ ದೇಶಗಳ ನಡುವಿನ ದೀರ್ಘಕಾಲದ ಮೈತ್ರಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಎರಡೂ ಕಡೆಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



