ನ್ಯೂಜ್ ಡೆಸ್ಕ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಈಗ ಶಕ್ತಿ ಆಗಿದೆ ಸಚಿವರಾಗಬೇಕು ಎನ್ನುವ ಆಕಾಂಕ್ಷಿಗಳು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಎನ್ ಚಲುವರಾಯಸ್ವಾಮಿ, ಮಧು ಬಂಗಾರಪ್ಪ, ಸಂತೋಷ್ ಲಾಡ್, ಕೆ ಎಂ ಶಿವಲಿಂಗೇಗೌಡ, ಶ್ರೀನಿವಾಸ್ ಮಾನೆ, ಯಾಸಿರ್ ಅಹ್ಮದ್ ಖಾನ್ ಪಠಾಣ್ ಮತ್ತು ಕೆ ವೆಂಕಟೇಶ್ ಅವರುಗಳು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪ್ರಮುಖ ಆಕಾಂಕ್ಷಿಗಳು.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಕೂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಸಂದರ್ಭದಲ್ಲಿ ಕೆಲವು ಜೆಡಿಎಸ್ ಕಾರ್ಯಕರ್ತರು ಅವರ ಕಡೆಗೆ ಚಪ್ಪಲಿ ಎಸೆದ ಘಟನೆ ಕುರಿತು ವಿವರಿಸಿ ಭಾವುಕರಾದರು.
ಇದಕ್ಕೆ ಸಿದ್ದರಾಮಯ್ಯ ಮಾತನಾಡಿ ಪೊಲೀಸರ ಉಪಸ್ಥಿತಿಯ ಹೊರತಾಗಿಯೂ ಆಡಳಿತ ಪಕ್ಷದ ಶಾಸಕರೊಬ್ಬರು ಇಂತಹ ಘಟನೆಯನ್ನು ಎದುರಿಸಬೇಕಾಯಿತು ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.ಜೊತೆಗೆ ಸಿದ್ದರಾಮಯ್ಯ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಘಟನೆಯ ಕುರಿತು ಸೂಕ್ತ ತನಿಖೆ ನಡೆಸುವಂತೆ ಹೇಳಿದ ಅವರು ಪ್ರದೀಪ್ ಅವರನ್ನು ನಿರುತ್ಸಾಹಗೊಳಿಸಬೇಡಿ ಎಂದು ಒತ್ತಾಯಿಸಿದರು ಮತ್ತು ರಾಜಕೀಯ ಜೀವನದಲ್ಲಿ ಇಂತಹ ಘಟನೆಗಳು ಸಾಮಾನ್ಯ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ತಮಗೂ ಮಂತ್ರಿ ಸ್ಥಾನ ಕೊಡಿಸುವಂತೆ ಹಲವು ಆಕಾಂಕ್ಷಿ ಶಾಸಕರು ಸಿದ್ದರಾಮಯ್ಯ ಅವರ ಬೆಂಬಲವನ್ನು ಕೋರುತ್ತಿರುವ ಬಗ್ಗೆ ಹೇಳಲಾಗುತ್ತಿದೆ.ಿ
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಂಪುಟ ವಿಸ್ತರಣೆಗಾಗಿ ಕಾಯುತ್ತಿದ್ದು 34 ಸದಸ್ಯರ ಸಂಪುಟದಲ್ಲಿ 20 ಸ್ಥಾನಗಳು ಖಾಲಿ ಇವೆ.



