ನಾಲ್ಕನೇ ವರ್ಷದ ಕಾನೂನು ಪದವಿ ವಿದ್ಯಾರ್ಥಿನಿ ಮೂರು ವರ್ಷಗಳ ಹಿಂದೆ ಓಂ ಶಕ್ತಿ ಮಾಲೆ ಹಾಕುವ ವೇಳೆ ಪರಿಚಯವಾಗಿದ್ದ ಧನುಷ್ ನೊಂದಿಗೆ ಪ್ರೀತಿಯ ಸೆಳೆತಕ್ಕೆ ಸಿಲುಕಿದ್ದಳು.ಧನುಷ್ ಗೆ ಮದುವೆಯಾದ ವಿಚಾರ ತಿಳಿಯುತ್ತಿದ್ದಂತೆ ಆತನಿಂದ ದೂರ ಸರಿಯುವ ಪ್ರಯತ್ನದಲ್ಲಿದ್ದಾಗ ಹತ್ಯೆ
ನ್ಯೂಜ್ ಡೆಸ್ಕ್:ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಯನ್ನು ತಮ್ಮ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಧಾರುಣ ಘಟನೆ ಬೆಂಗಳೂರಿನ ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹತ್ಯೆಯಾದ ಯುವತಿ ಅಮೃತಾ ಕಾನೂನು ವಿದ್ಯಾರ್ಥಿನಿಯಾಗಿದ್ದು ಈಕೆಯನ್ನು ಹತ್ಯೆ ಮಾಡಿದ ಆರೋಪದಡಿ ಪ್ರಿಯಕರ ಧನುಷ್ ಹಾಗೂ ಆತನ ಸಹೋದರ ಸೂರ್ಯನನ್ನು ಬಂಧಿಸಲಾಗಿದೆ. ಜುಲೈ 13ರಂದು ಘಟನೆ ನಡೆದಿದ್ದು, ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಮೃತಾ, ಕೊನೆಗೂ ಸಾವನ್ನಪ್ಪಿದ್ದಾಳೆ.
ಘಟನೆ ಹಿನ್ನಲೆ
ಬೆಂಗಳೂರಿನ ಹೆಚ್ಎಎಲ್ ಕೋಡಿಚಿಕ್ಕನಹಳ್ಳಿಯಲ್ಲಿ ಅಮೃತಾ ಕುಟುಂಬ ವಾಸವಾಗಿದ್ದು, ನಾಲ್ಕನೇ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದಳು.ಈಗ್ಗೆ ಮೂರು ವರ್ಷಗಳ ಹಿಂದೆ ಓಂ ಶಕ್ತಿ ಮಾಲೆ ಹಾಕುವ ವೇಳೆ ಎರಡು ಕುಟುಂಬಗಳ ನಡುವೆ ಪರಿಚಯ ಆಗಿತ್ತು. ಬಳಿಕ ಧನುಷ್ ಮತ್ತು ಅಮೃತ ಆತ್ಮೀಯರಾಗಿದ್ದರು. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಧನುಷ್ಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಪಡೆದಿದ್ದ. ಆತನಿಗೆ ಒಂದು ಮಗು ಕೂಡ ಇತ್ತು. ಈ ವಿಚಾರವನ್ನು ಅಮೃತಳಿಂದ ಮುಚ್ಚಿಟ್ಟಿದ್ದ. ವಿಷಯ ಇತ್ತಿಚಿಗೆ ಅಮೃತಾಗೆ ತಿಳಿದಿದೆ ತಕ್ಷಣ ಆಕೆ ಧನುಷ್ ನಿಂದ ಅಂತರ ಕಾಪಾಡಿಕೊಳ್ಳುತ್ತ ಬಂದಿದ್ದಾಳೆ ಇದರಿಂದ ಆಕ್ರೋಶಗೊಂಡ ಧನುಷ್ನ ತನ್ನ ತಮ್ಮ ಸೂರ್ಯನೊಂದಿಗೆ ವಿಚಾರ ಹಂಚಿಕೊಂಡಿದ್ದು ಅಣ್ಣನ ಪ್ರೀತಿ ನಿರಾಕರಿಸಿದವಳನ್ನು ಬಿಡುವುದಿಲ್ಲ ಎಂದು ಹೇಳಿಕೊಂಡು ಕಳೆದ ಜುಲೈ 13ರಂದು ಸಂಜೆ ಯುವತಿಯ ಮನೆಯ ಬಳಿ ತೆರಳಿ ರಾದ್ದಾಂತ ಮಾಡಿದ್ದು ಅಮೃತ ಮನೆಯ ಹೊರಗೆ ಬರುತ್ತಿದ್ದಂತೆ ಆಕೆಯ ಬೆನ್ನು ಮತ್ತು ಎದೆಗೆ ಮನಬಂದಂತೆ ಚಾಕುವಿನಿಂದ ಇರಿದು ಅಟ್ಟಹಾಸ ಮೆರೆದಿದ್ದು ಗಾಯಗೊಂಡ ಅಮೃತಾ ಕುಸಿದು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದನ್ನು ಕಂಡವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೇ, ಜುಲೈ 15ರಂದು ಸಂಜೆ ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಚಾಕು ಇರಿದ ಆರೋಪಿಗಳಾದ ಸೂರ್ಯ ಹಾಗೂ ಧನುಷ್ ವಿರುದ್ಧ ಜೀವನ ಭೀಮಾನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.



