ನ್ಯೂಜ್ ಡೆಸ್ಕ್: ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತ್ ಸುಧೀರ್ಘ ಅವಧಿಯ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಶುಕ್ರವಾರ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಮಾಡಿದ ಮನವಿ ಹಿನ್ನೆಲೆಯಲ್ಲಿ ಹೊರಟ್ಟಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿದುಬಂದಿದೆ.
75 ಸಂಖ್ಯಾ ಸದಸ್ಯ ಬಲದ ಕರ್ನಾಟಕ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ, ಸಭಾಪತಿ ಮತ್ತು ಉಪಸಭಾಪತಿ ಎರಡೂ ಹುದ್ದೆಗಳನ್ನು ತನ್ನ ವಶಕ್ಕೆ ಪಡೆಯಲು ಆಡಳಿತಾರೂಢ ಕಾಂಗ್ರೆಸ್ ಮುಂದಾಗಿದೆ. ಈ ರಾಜಕೀಯ ಬೆಳವಣಿಗೆಯ ನಡುವೆಯೇ ಬಸವರಾಜ ಹೊರಟ್ಟಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನಿಸಿದ್ದರು.
ಈಗ ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದಲೇ ತಾವು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಬಸವರಾಜ ಹೊರಟ್ಟಿ ಅವರೇ ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಸಭಾಪತಿ ಸ್ಥಾನಕ್ಕೆ ತಮ್ಮ ಪಕ್ಷದ ಅಭ್ಯರ್ಥಿ ಹೆಸರು ಪ್ರಕಟಿಸಿದ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್ ಅವರು ಕಳೆದ ಎರಡು ದಿನಗಳ ಹಿಂದೆ ಬಸವರಾಜ ಹೊರಟ್ಟಿ ಅವರಿಗೆ ಕರೆ ಮಾಡಿ, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದರು.
ಈ ನಡವಳಿಕೆಗೆ ಬಸವರಾಜ ಹೊರಟ್ಟಿ ಅವರ ತೀವ್ರ ಬೇಸರಗೊಂಡಿದ್ದಲ್ಲದೆ ಸಿಎಂ ಕರೆ ಮಾಡಿದ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ್ದ ಬಸವರಾಜ ಹೊರಟ್ಟಿ ಅವರು, ‘ಇದು ಕಲುಷಿತ ರಾಜಕಾರಣ. ಮನಸ್ಸಿಗೆ ತುಂಬಾ ನೋವಾಗಿದೆ. ಇತಿಹಾಸದಲ್ಲೇ ಈ ರೀತಿ ಆಗಿರಲಿಲ್ಲ. ಎಂದು ತಮ್ಮ ನೋವು ತೊಡಿಕೊಂಡಿದ್ದರು.
Trending
- ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ ಸಲ್ಲಿಕೆ!
- ಕೋಲಾರ-ದೇವನಹಳ್ಳಿ ನಡುವೆ Hಕ್ರಾಸ್ ಬಳಿ ಫ್ಲೈಓವರ್ ನಿರ್ಮಾಣ!
- ಗ್ರಹ ದೋಷ ನಿವಾರಣೆಗೆ ಭೈರವಾರಾಧನೆ:ಕಾಲ ಭೈರವಾಷ್ಟಮಿ ಪೂಜೆ ಮಹತ್ವ!
- ಶ್ರೀನಿವಾಸಪುರ: ಚೌಡೇಶ್ವರಿ ದೇಗುಲದಲ್ಲಿ ಚಾಮುಂಡೇಶ್ವರಿ ಜಯಂತ್ಯುತ್ಸವ
- ಶಿವಕುಮಾರ್ ಸಂಪುಟ ವಿಸ್ತರಣೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಸಿಗದ ಮಂತ್ರಿ ಸ್ಥಾನ!
- ಶ್ರೀನಿವಾಸಪುರ:ಅಪಘಾತಕ್ಕೆ ಆಹ್ವಾನ ನೀಡುತ್ತಿದೆ ಪಟ್ಟಣದ ರಸ್ತೆ ವೃತ್ತಗಳು!
- history created:ವಂದೇ ಭಾರತ್ ರೈಲಿನಲ್ಲಿ ಜೀವಂತ ಹೃದಯ ರವಾನೆ!
- ತಿರುಮಲ ನಡಿಗೆ ಮಾರ್ಗದಲ್ಲಿ ಅಂಜನೇಯ ವಿಗ್ರಹ ಕದ್ದು ಸಿಕ್ಕಿಬಿದ್ದ ಖದೀಮ!
Friday, August 7



