ಶ್ರೀನಿವಾಸಪುರ:ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ಜಯಂತಿ ಆಚರಣೆಗೆ ತಾಲೂಕು ಆಡಳಿತ ಮುಂದಾಗದೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಹಿಂದುಳಿದ ಸಮಾಜಗಳ ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ್ ಆರೋಪಿಸಿದರು.
ದೇವರಾಜ ಅರಸು ಅವರ ಜಯಂತಿ ಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಅರ್ಥಪೂರ್ಣವಾಗಿ ಆಚರಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಹಿಂದುಳಿದ ವರ್ಗಗಳು, ಬಡವರು ಹಾಗೂ ಶೋಷಿತ ಸಮಾಜಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದ ದೇವರಾಜ ಅರಸು ಅವರ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಪ್ರತಿವರ್ಷ ಅವರ ಜಯಂತಿಯನ್ನು ಆಚರಿಸುವುದು ಸರ್ಕಾರದ ಆದೇಶ ಆದರೆ ಜಯಂತಿ ಆಚರಣೆ ಕಾರ್ಯಕ್ರಮದ ಆಯೋಜನೆ, ಪ್ರಚಾರ ಹಾಗೂ ಸಾರ್ವಜನಿಕರ ಭಾಗವಹಿಸುವಿಕೆಗೆ ಸಂಬಂಧಿಸಿದಂತೆ ಜವಾಬ್ದಾರಿ ತಗೆದುಕೊಳ್ಳುವಲ್ಲಿ ತಹಶೀಲ್ದಾರ್ ತೀವ್ರ ನಿರ್ಲಕ್ಷ್ಯ ಬೇಕಾಬಿಟ್ಟಿ ವರ್ತನೆ ಎದ್ದು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದಲ್ಲದೆ ಇಂತಹ ಬೇಜವಾಬ್ದಾರಿ ತಹಶೀಲ್ದಾರ್ ವಿರುದ್ದ ಸರ್ಕಾರ ಕ್ರಮ ಜರಿಗಿಸುವಂತೆ ಅಗ್ರಹಿಸಿದರು.

ಜಯಂತಿ ಅಚರಣೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸ್ಥಳೀಯ ಹಿಂದುಳಿದ ಸಮಾಜಗಳ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರಿಗೆ ಸಮರ್ಪಕವಾಗಿ ಮಾಹಿತಿ ನೀಡದಿರುವುದು, ಕಾರ್ಯಕ್ರಮವನ್ನು ರೂಪಿಸಿದ್ದಾರೆ ಸರ್ಕಾರಿ ಕಾರ್ಯಕ್ರಮ ಎಂದು ಬಂದರೆ ಇಲ್ಲಿ ಅಧಿಕಾರಿಗಳೆ ಇಲ್ಲ ದೇವರಾಜ ಅರಸು ಅವರ ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ತಕ್ಕ ಗೌರವ ನೀಡಬೇಕು. ಅವರ ಆಡಳಿತಾವಧಿಯಲ್ಲಿ ಜಾರಿಯಾದ ಭೂ ಸುಧಾರಣೆ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಾಮಾಜಿಕ ಸಮಾನತೆಯಂತಹ ಪ್ರಮುಖ ಕ್ರಮಗಳು ಇಂದಿಗೂ ಪ್ರಸ್ತುತವಾಗಿವೆ. ಇಂತಹ ಮಹತ್ವದ ನಾಯಕರ ಜಯಂತಿಯನ್ನು ಕೇವಲವಾಗಿ ನಡೆಸದೆ, ಅವರ ಆದರ್ಶಗಳು ಮತ್ತು ಸಾಧನೆಗಳನ್ನು ಯುವಜನರಿಗೆ ಪರಿಚಯಿಸುವ ರೀತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಬೇಕಾಗಿದೆ ಎಂದು ಜಗದೀಶ್ ಹೇಳೀದರು.




