ಕೋಲಾರ ಜಿಲ್ಲೆಯಲ್ಲಿ ರೈಲ್ವೆ ಗೇಟ್ ಮುಕ್ತಗೊಳಿಸುವುದಾಗಿ ಸಚಿವ ವಿ. ಸೋಮಣ್ಣ ಘೋಷಣೆ
ಶ್ರೀನಿವಾಸಪುರ: ಅಗತ್ಯ ಜಾಗ ಒದಗಿಸಿದರೆ ರೈಲ್ವೆ ಇಲಾಖೆಯೊಂದಿಗೆ ಚರ್ಚಿಸಿ, ಶ್ರೀನಿವಾಸಪುರದಲ್ಲಿ ಸುಮಾರು 2,000 ಮಂದಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ಸಚಿವ ವಿ. ಸೋಮಣ್ಣ ಭರವಸೆ ನೀಡಿದರು. ಸ್ಥಳೀಯವಾಗಿ ಲಭ್ಯವಿರುವ ಸೂಕ್ತ ಜಾಗದ ಕುರಿತು ಮಾಹಿತಿ ನೀಡಿದರೆ, ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಲ್ಲಿನ ಸಾಧ್ಯತೆಗಳನ್ನು ಪರಿಶೀಲಿಸಲಾಗುವುದು. ಈ ಮೂಲಕ ಶ್ರೀನಿವಾಸಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು. ರೈಲ್ವೆ ಇಲಾಖೆಗೆ ಸಂಬಂಧಿಸಿದ ವಿವಿಧ ಚಟುವಟಿಕೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಅವಕಾಶ ದೊರೆತರೆ, ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯಾಗುವುದರ ಜೊತೆಗೆ ವ್ಯಾಪಾರ–ವಹಿವಾಟು ಮತ್ತು ಆರ್ಥಿಕ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ ಎಂದರು..ಮಾತನಾಡಿದರು. ಈ ಸೇತುವೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ವಾಹನ ಸಂಚಾರ ಸುಗಮವಾಗಲಿದೆ. ರೈಲ್ವೆ ಗೇಟ್ ಬಳಿ ವಾಹನಗಳು ದೀರ್ಘಕಾಲ ಕಾಯಬೇಕಾದ ಪರಿಸ್ಥಿತಿ ತಪ್ಪಲಿದೆ ಎಂದರು. ಕೇಂದ್ರ ಎನ್ಡಿಎ ಸರ್ಕಾರದ 12 ವರ್ಷಗಳ ಅವಧಿಯಲ್ಲಿ ದೇಶದ ರೈಲ್ವೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ, ಕೋಲಾರ ಜಿಲ್ಲೆಯಲ್ಲಿಯೂ ರೈಲ್ವೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಜಿಲ್ಲೆಯಲ್ಲಿ ರೈಲ್ವೆ ಇಲಾಖೆಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ರೈಲ್ವೆ ಗೇಟ್ಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಲು ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಹೆಚ್ಚಿನ ಅಭಿವೃದ್ಧಿಯನ್ನು ನೀರಿಕ್ಷೆ ಮಾದಬಹುದಾಗಿದೆ ಎಂದರು. ಆಗ್ನೇಯ ರೈಲ್ವೆ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ರಾಜಕೀಯ ಚುನಾವಣೆಗಷ್ಟೆ ಮೀಸಲು:ಕಾರ್ಯಕ್ರಮದಲ್ಲಿ ಬಂಗಾರಪೇಟೆ ಶಾಸಕರ ಗೈರುಹಾಜರಾತಿ ಕುರಿತು ಪರೋಕ್ಷವಾಗಿ ಪ್ರತಿಕ್ರಿಯಿಸಿದ ಸಚಿವ ಸೋಮಣ್ಣ, ಅಭಿವೃದ್ಧಿ ಕಾರ್ಯದಲ್ಲಿ ಪಕ್ಷಭೇದ ಮರೆತು ಎಲ್ಲರೂ ಕೈಜೋಡಿಸಬೇಕು. ಜನರ ಹಿತದೃಷ್ಟಿಯಿಂದ ನಡೆಯುವ ಅಭಿವೃದ್ಧಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ನೀಡಬಾರದು. ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡೋಣ ಉಳಿದ ಸಮಯದಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡೋಣ ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ನೀಡಿದರು.
ಕಾರ್ಯಕ್ರಮದಲ್ಲಿ ಹಾಲಿ ಸಂಸದ ಮಲ್ಲೇಶ್ ಬಾಬು,ಮಾಜಿ ಸಂಸದ ಮುನಿಶ್ವಾಮಿ,ಮಾಜಿ ಶಾಸಕ ವೆಂಕಟಮುನಿಯಪ್ಪ ಮುಂತಾದವರು ಇದ್ದರು.



