- ಅಂತಿಮ ತೀರ್ಮಾನ ಸೆ.7 ರಂದು ಹೊರಬೀಳಲಿದೆ
ಕೋಲಾರ: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್)ನ ನೂತನ ಅಧ್ಯಕ್ಷರಾಗಿ ಶಾಸಕರೊಬ್ಬರು ಆಯ್ಕೆಯಾಗಲಿದ್ದಾರೆ ಎಂಬ ಸುಳಿವನ್ನು ಶಾಸಕ ಕೆ.ವೈ.ನಂಜೇಗೌಡರು ನೀಡಿದ್ದು ಈ ವಿಚಾರ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಸಾಕಷ್ಟು ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಪ್ರಸ್ತಾಪಿಸದೆ
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ಜಿಲ್ಲೆಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಹೆಸರು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ತಿರ್ಮಾನ ಆಗಿದೆ ಸೆ.7 ರಂದು ನಿಗದಿಯಂತೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ನಡೆಯಲಿದೆ ಎಂದು ಶಾಸಕ ಕೆ.ವೈ.ನಂಜೇಗೌಡರು ಹೇಳಿದ್ದಾರೆ.
ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆಗಳನ್ನು ತಡೆಯಲು ಕೆಲವರು ನಿರಂತರವಾಗಿ ಕಾಣದ ಕೈಗಳು ಕೆಲಸ ಮಾಡುತಿದ್ದು ಈಗಾಗಲೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಹೈಕೋರ್ಟ್ನ ಏಕಸದಸ್ಯ ಪೀಠವಾಗಲಿ ಅಥವಾ ದ್ವಿಸದಸ್ಯ ಪೀಠವಾಗಲಿ ಚುನಾವಣೆಗೆ ಯಾವುದೇ ತಡೆ ನೀಡಿಲ್ಲ. ಹೀಗಾಗಿ ಸೆ.7ರಂದು ಚುನಾವಣೆ ನಡೆಯುವುದು ಖಚಿತ ಎಂದು ಅವರು ಸ್ಪಷ್ಟಪಡಿಸಿದ್ದಾರೆ
ರೈತರು, ಮಹಿಳಾ ಸಂಘಗಳ ಹಿತ ಕಾಪಾಡುವ ಅಗತ್ಯ
ಕಳೆದ ಅವಧಿಯಲ್ಲಿ ರೈತರು ಹಾಗೂ ಮಹಿಳಾ ಸ್ವಸಹಾಯ ಸಂಘಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಬ್ಯಾಂಕಿನ ಆಡಳಿತವನ್ನು ಮತ್ತೆ ಸುಸ್ಥಿತಿಗೆ ತರುವಂತ ಸಮರ್ಥ ನಾಯಕತ್ವದ ಅಗತ್ಯವಾಗಿದೆ ಈ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ಅಗತ್ಯ ನೆರವು, ಅನುದಾನ ಹಾಗೂ ಸೌಲಭ್ಯಗಳನ್ನು ತರುವ ಸಾಮರ್ಥ್ಯ ಹೊಂದಿರುವ ಶಾಸಕರೊಬ್ಬರು ಅಧ್ಯಕ್ಷರಾಗುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಎಲ್ಲರೂ ಮುಖಂಡರು ಬಂದಿದ್ದಾರೆ ಎಂದು ನಂಜೇಗೌಡರು ಹೇಳಿದ್ದಾರೆ.
ಈ ವಿಚಾರದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ಮಾಲೂರು ಶಾಸಕ ಕೆ.ವೈ. ನಂಜೇಗೌಡ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿ ಅನಿಲ್ಕುಮಾರ್, ಖಾಜಿಕಲ್ಲಹಳ್ಳಿ ಮುನಿರಾಜು, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್ ಸೇರಿದಂತೆ ಹಲವು ಮುಖಂಡರು ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರು ಶುಕ್ರವಾರ ಸಭೆ ಸೇರಿ ಚರ್ಚೆ ನಡೆಸಿ
ಸಭೆಯಲ್ಲಿ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಅವರನ್ನು ಡಿಸಿಸಿ ಬ್ಯಾಂಕ್ನ ಅಧ್ಯಕ್ಷರನ್ನಾಗಿ ಮಾಡಲು ತೀರ್ಮಾನ ಕೋಗೊಳ್ಳಲಾಗಿದೆ ಎನ್ನುತ್ತಾರೆ.
ಉಭಯ ಜಿಲ್ಲೆಗಳ ನಾಯಕರ ಸಮ್ಮತಿ
ಪ್ರಸ್ತುತ ಡಿಸಿಸಿ ಬ್ಯಾಂಕ್ನ ನಿರ್ದೇಶಕರಾಗಿರುವ ಎಂಎಲ್ಸಿ ಅನಿಲ್ಕುಮಾರ್ ಸೇರಿದಂತೆ ಉಭಯ ಜಿಲ್ಲೆಗಳ ಬಹುತೇಕ ಎಲ್ಲ ಮುಖಂಡರು ಬ್ಯಾಂಕಿನ ಹಿತದೃಷ್ಟಿಯಿಂದ ಈ ಪ್ರಸ್ತಾವನೆಗೆ ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ, ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಹಾಗೂ ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್ ಅವರ ಪೈಕಿ, ಕೊತ್ತೂರು ಮಂಜುನಾಥ್ ಅವರಿಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಒಮ್ಮತ ಮೂಡಿದೆ ಎನ್ನಲಾಗಿದ್ದು
ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಅಥವಾ ಗುಂಪುಗಾರಿಕೆ ಇಲ್ಲ ಎಂದು ನಂಜೇಗೌಡರು ಸ್ಪಷ್ಟಪಡಿಸಿದ್ದಾರೆ.
ಅಂತಿಮ ತೀರ್ಮಾನ ಸೆ.7ರಂದು
ಡಿಸಿಸಿ ಬ್ಯಾಂಕ್ನ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ಸೆ.7ರಂದು ಚುನಾವಣೆ ನಡೆಯಲಿದ್ದು, ಅಂದು ಅಧಿಕೃತವಾಗಿ ಅಂತಿಮ ತೀರ್ಮಾನ ಹೊರಬೀಳಲಿದ್ದು ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ಅವರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಎಂದು ನಂಜೇಗೌಡರು ಹೇಳಿದ್ದಾರೆ



