ಶ್ರೀನಿವಾಸಪುರ: ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಸ್ಥಾಪನೆಗೊಂಡು 25 ವರ್ಷಗಳು ಪೂರೈಸಿದ್ದು, ಸಮಾಜದಲ್ಲಿ ಗುರುತರವಾದ ಸೇವೆಯನ್ನು ಪೂರೈಸಿರುವ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಹಾಗೂ ಹಿಂದುಳಿದ ಜಾತಿಗಳ ಬೃಹತ್ ಜನ ಜಾಗೃತಿ ಸಮಾವೇಶವು ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿದ್ದು ಬೆಂಗಳೂರಿನ ತ್ರೀಪುರ ವಾಸಿನಿ, ಅರಮನೆ ಮೈದಾನದಲ್ಲಿ ಆಯೋಜಿಸಿರುವ ಹಿಂದುಳಿದ ಜಾತಿಗಳ ಬೃಹತ್ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಶ್ರೀನಿವಾಸಪುರ ತಾಲ್ಲೂಕಿನ ಹಿಂದುಳಿದ ಜಾತಿ ಸಮಾಜದ ಮುಖಂಡರು ಹಾಗೂ ಸಮುದಾಯದವರು ಭಾನುವಾರ ಬೆಂಗಳೂರಿಗೆ ತೆರಳಿದರು.
ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಹಕ್ಕುಗಳು ಹಾಗೂ ಸರ್ಕಾರದ ಸೌಲಭ್ಯಗಳ ಸಮರ್ಪಕ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಸಮಾವೇಶವನ್ನು ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಸುದೀರ್ಘ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ನಿಕಟಪೂರ್ವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಒಕ್ಕೂಟದ ವತಿಯಿಂದ ಅಭಿನಂದನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು
ಶ್ರೀನಿವಾಸಪುರದಿಂದ ತೆರಳಿದ ವಿವಿಧ ಹಿಂದುಳಿದ ಸಮಾಜಗಳ ಮುಖಂಡರು ತಿಳಿಸಿದರು.
ಹಿಂದುಳಿದ ಜಾತಿಗಳ ಒಗ್ಗಟ್ಟು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಡೆಯುತ್ತಿರುವ ಈ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ರಜತ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಸಮಾವೇಶದ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗದ ಎಲ್ಲಾ ಸಚಿವರುಗಳು, ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ಚುನಾಯಿತ ಜನಪ್ರತಿನಿಧಿಗಳು ಹಾಗೂ ರಾಜ್ಯದ ಎಲ್ಲಾ ಹಿಂದುಳಿದ ಸಮುದಾಯದವರು ರಾಜ್ಯದ ವಿವಿಧ ಜಿಲ್ಲೆಗಳಿಂದ ಹಿಂದುಳಿದ ಜಾತಿಗಳ ಮುಖಂಡರು ಹಾಗೂ ಸಮುದಾಯದವರು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದರು. ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಹೋರಡುವ ಮುನ್ನ ತಾಲ್ಲೂಕಿನ ಹಿಂದುಳಿದ ಜಾತಿ ಸಮಾಜದ ಮುಖಂಡರು ತಹಶೀಲ್ದಾರ್ ಕಚೇರಿ ಮುಂಬಾಗದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಕೆ ಹೂಮಾಲೆ ಹಾಕಿ ನಂತರ ಪ್ರಯಾಣ ಹೋರಟರು.
Trending
- ಹಿಂದುಳಿದ ಜಾತಿಗಳ ಜನಜಾಗೃತಿ ಸಮಾವೇಶಕ್ಕೆ ಶ್ರೀನಿವಾಸಪುರದಿಂದ ಜನ!
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
Sunday, September 6



