ಕೋಲಾರ: ಅರಣ್ಯ ಇಲಾಖೆ ವಶಕ್ಕೆ ಪಡೆದಿರುವ ರೈತರ ಜಮೀನುಗಳನ್ನು ಮರಳಿ ನೀಡಬೇಕು ಎಂದು ಆಗ್ರಹಿಸಿ ರೈತರು ಕೋಲಾರ ಜಿಲ್ಲೆಯ ಅರಣ್ಯ ಅಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ರೈತರ ಮೇಲೆ ಅರಣ್ಯ ಇಲಾಖೆ ದಬ್ಬಾಳಿಕೆ ನಡೆಸುತ್ತಿರುವ ಜಿಲ್ಲಾ ಉಪ ಅರಣ್ಯಾಧಿಕಾರಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ರೈತರು ಒತ್ತಾಯಿಸಿದರು.
ಶ್ರೀನಿವಾಸಪುರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ರೈತರ ಜಮೀನನ್ನು ಮರು ವಶಪಡಿಸಿಕೊಳ್ಳಲು ಆದೇಶ ಹೊರಡಿಸಿ, ವಾಟ್ಸ್ಆ್ಯಪ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿ ರೈತರನ್ನು ಭಯ ಭಿತರನ್ನಾಗಿಸುವ ವಾತಾವರಣ ಸೃಷ್ಟಿಸಲು ಯತ್ನಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕೋಲಾರದ ಉಪ ಅರಣ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು
ಈ ಸಂದರ್ಭದಲ್ಲಿ ಕೋಮುಲ್ ನಿರ್ದೇಶಕ ಕೆ.ಕೆ. ಮಂಜು ಮಾತನಾಡಿ, ಕೇತಗಾನಹಳ್ಳಿ ಗ್ರಾಮದ ರೈತರ ಜಮೀನನ್ನು ಅರಣ್ಯ ಇಲಾಖೆ ಮರುವಶಪಡಿಸಿಕೊಳ್ಳಲು ಆದೇಶಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸುವ ಅಧಿಕಾರಿಗಳ ನಡೆ ಖಂಡನೀಯವದದ್ದು ಎಂದರು.
ರೈತರು ಮಾತನಾಡಿ, ಕಂದಾಯ ಇಲಾಖೆಯಿಂದ ಸಾಗುವಳಿ ಚೀಟಿ ಪಡೆದು ಹಲವು ವರ್ಷಗಳಿಂದ ಜಮೀನಿನಲ್ಲಿ ಕೃಷಿ ಮಾಡಲಾತ್ತಿದ್ದೆ ಇದೀಗ ಅರಣ್ಯ ಇಲಾಖೆಯ ಅಧಿಕಾರಿಗಳು ಜಮೀನು ಅರಣ್ಯಕ್ಕೆ ಸೇರಿದೆ ಎಂದು ಹೇಳಿ ರೈತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಅಧಿಕಾರಿಗಳು ಬಂದೂಕು ತೋರಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಮೇಕಲ ನಾರಾಯಣಸ್ವಾಮಿ ಮಾತನಾಡಿ, ಸರ್ಕಾರವೇ ಮಂಜೂರು ಮಾಡಿರುವ ಭೂಮಿಯಲ್ಲಿ ರೈತರು ಬೆಳೆ ಬೆಳೆಸಿಕೊಂಡು ವ್ಯವಸಾಯ ,ಮಾಡುತ್ತಿದ್ದಾರೆ ಇಂತಹ ಸಂದರ್ಭದಲ್ಲಿ, ಅರಣ್ಯ ಇಲಾಖೆಯ ಅಧಿಕಾರಿಗಳು ದೌರ್ಜನ್ಯದಿಂದ ತೆರವು ಕಾರ್ಯಾಚರಣೆ ನಡೆಸುತ್ತಿರುವುದು ಖಂಡನೀಯ ಎಂದರು.
ರೈತರು ತಮ್ಮ ಮೆಲಂಗಿ ತಗೆದು ಅರೆಬೆತ್ತಲೆ ಪ್ರದರ್ಶನ ಮಾಡಿ ಆಕ್ರೋಶ ಹೋರಹಾಕಿದರು. ಪ್ರತಿಭಟನೆಯಲ್ಲಿ ಸಂಜಯ್ ರೆಡ್ಡಿ, ಕೇತಗಾನಹಳ್ಳಿ ನಾಗರಾಜ್, ಪಾತಕೋಟ ನವೀನ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ ಅಧ್ಯಕ್ಷ ಅಂಬರೀಷ್, ಶ್ರೀನಿವಾಸಪುರ ಮುನಿಯಪ್ಪ, ರಮೇಶ್ಬಾಬು ಅಂಬೇಡ್ಕರ್ ಪಾಳ್ಯದ ನರಸಿಂಹಮೂರ್ತಿ ಸೇರಿದಂತೆ ರೈತ ಮುಖಂಡರು, ರೈತರು ಹಾಗೂ ವಿವಿಧ ಪಕ್ಷಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
Trending
- ಶ್ರೀನಿವಾಸಪುರ:ತಾಲೂಕು ಶಿಕ್ಷಕರ ಸಂಘದಲ್ಲಿ ಗುಂಪುಗಾರಿಕೆ,ಭುಗಿಲೆದ್ದ ಭಿನ್ನಮತ!
- ನಮ್ಮ ಜಮೀನು ನಮಗೆ ವಾಪಸ್ಸು ಕೋಡಿ DFO ಕಚೇರಿ ಮುಂದೆ ಪ್ರತಿಭಟನೆ!
- ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಕೊತ್ತೂರು ಮಂಜುನಾಥ್ ಅವಿರೋಧ ಆಯ್ಕೆ!
- ಶ್ರೀನಿವಾಸಪುರ: ಶಿಕ್ಷಕನ ವಿರುದ್ಧ ದೂರು ವಿರೋಧಿಸಿ ನೌಕರರ ಸಂಘದ ಬೃಹತ್ ಪ್ರತಿಭಟನೆ!
- ಹಿಂದುಳಿದ ಜಾತಿಗಳ ಜನಜಾಗೃತಿ ಸಮಾವೇಶಕ್ಕೆ ಶ್ರೀನಿವಾಸಪುರದಿಂದ ಜನ!
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
Thursday, September 10



