ನ್ಯೂಜ್ ಡೆಸ್ಕ್: ಬ್ಯಾಂಕ್ ಗ್ರಾಹಕರಿಗೆ ಸೆಪ್ಟೆಂಬರ್ 26ರಿಂದ ಸತತ ಐದು ದಿನಗಳ ಕಾಲ ಶಾಖಾ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಮುಷ್ಕರದ ಅವಧಿಯಲ್ಲಿ ಬ್ಯಾಂಕ್ ಶಾಖೆಗಳಿಗೆ ಸಂಬಂಧಿಸಿದ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ, ಅಗತ್ಯವಿರುವ ಶಾಖಾ ಸಂಬಂಧಿತ ಕೆಲಸಗಳನ್ನು ಮುಂಚಿತವಾಗಿಯೇ ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚಿಸಿದೆ.
ಸೆಪ್ಟೆಂಬರ್ 26ರಂದು ನಾಲ್ಕನೇ ಶನಿವಾರ ಹಾಗೂ ಸೆಪ್ಟೆಂಬರ್ 27ರಂದು ಭಾನುವಾರವಾಗಿರುವುದರಿಂದ ಬ್ಯಾಂಕ್ ಶಾಖೆಗಳಿಗೆ ನಿಯಮಿತ ರಜೆ ಇದೆ. ಇದರ ಬೆನ್ನಲ್ಲೇ ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ನಿಗದಿಯಾಗಿದೆ.
ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಸೇರಿದಂತೆ ಬ್ಯಾಂಕ್ ಕಾರ್ಮಿಕ ಸಂಘಟನೆಗಳು ಐದು ದಿನಗಳ ಬ್ಯಾಂಕಿಂಗ್ ವಾರ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟಿವೆ. ಸರ್ಕಾರದ ಅಧಿಕೃತ ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ಮುಷ್ಕರ ನಿಗದಿಯಾಗಿದ್ದು
ಸೆಪ್ಟೆಂಬರ್ 30ರಂದು ಬ್ಯಾಂಕ್ಗಳ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯ ಇರುವುದರಿಂದ ಆ ದಿನದ ಸೇವಾ ವ್ಯತ್ಯಯವು ಗ್ರಾಹಕರು ಹಾಗೂ ಬ್ಯಾಂಕಿಂಗ್ ವ್ಯವಹಾರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಕಾರಣದಿಂದ ಸರ್ಕಾರವೂ ಸಾರ್ವಜನಿಕ ವಲಯದ ಬ್ಯಾಂಕ್ಗಳಲ್ಲಿ ಸೇವೆಗಳು ನಿರಂತರವಾಗಿರಲು ಮನವಿ ಮಾಡಿದೆ.
ಗ್ರಾಹಕರು ಗಮನಿಸಬೇಕಾದ ದಿನಗಳು
ಸೆ. 26, ಶನಿವಾರ. ನಾಲ್ಕನೇ ಶನಿವಾರದ ರಜೆ,
ಸೆ. 27, ಭಾನುವಾರ ವಾರದ ರಜೆ,
ಸೆ. 28, ಸೋಮವಾರ ರಾಷ್ಟ್ರವ್ಯಾಪಿ ಮುಷ್ಕರ
ಸೆ. 29, ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರ,
ಸೆ. 30, ಬುಧವಾರ ರಾಷ್ಟ್ರವ್ಯಾಪಿ ಮುಷ್ಕರ
ಮುಷ್ಕರದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ಗಳ ಗ್ರಾಹಕರು ಸೆ. 28ಕ್ಕೂ ಮುನ್ನ ಅಗತ್ಯವಿರುವ ಶಾಖಾ ವ್ಯವಹಾರಗಳನ್ನು ಪೂರ್ಣಗೊಳಿಸಿಕೊಳ್ಳುವುದು ಸೂಕ್ತ ಎನ್ನಲಾಗುತ್ತಿದೆ. ಮುಷ್ಕರದಿಂದ ಬ್ಯಾಂಕ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಬಹುದಾದರೂ, ಪರ್ಯಾಯ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಗಳ ಮೂಲಕ ಸೇವೆಗಳನ್ನು ಪಡೆಯಬಹುದಾಗಿರುತ್ತದೆ.



