ಚೆನ್ನೈ:ಬಸ್ ಟಿಕೆಟ್ ಪಡೆಯುವಂತೆ ಹೇಳಿದ ಬಸ್ ಕಂಡೆಕ್ಟರ್ ನನ್ನು ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಕಂಡೆಕ್ಟರ್ ನನ್ನು ಬಸ್ ನಿಂದ ಹೊರಗಡೆಗೆ ತಳ್ಳಿ ಸಾಯಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿರುತ್ತದೆ.
ತಮಿಳುನಾಡಿನ ಕೊಯಮತ್ತೂರು ನಿಂದ ವಿಲ್ಲಿಪುರಂ ಗೆ ಶನಿವಾರ ಬೆಳಗಿನ ಜಾವದಲ್ಲಿ ತಮಿಳುನಾಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹೊರಟಿದ್ದ ಸಾರಿಗೆ ಬಸ್ಸಿನಲ್ಲಿ ಪಾನಮತ್ತ ವ್ಯಕ್ತಿಯೊಬ್ಬ ಹತ್ತಿದ್ದಾನೆ ಬಸ್ ಕಂಡಕ್ಟರ್ ಪ್ರಯಾಣಿಕರಿಗೆ ಟಿಕೆಟ್ ನೀಡುತ್ತ ಪಾನಮತ್ತ ವ್ಯಕ್ತಿಗೆ ಟಿಕೆಟ್ ತೆಗೆದುಕೊಳ್ಳುವಂತೆ ಹೇಳಿದ್ದು ಇದರಿಂದ ಕುಪಿತಗೊಂಡ ಕುಡುಕ ವ್ಯಕ್ತಿ ಕಂಡೆಕ್ಟರ್ ಜೊತೆ ಜಗಳ ತಗೆದಿದ್ದಾನೆ ಇದಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದು ತಳ್ಳಾಟ ನೂಕಾಟಗಳು ನಡೆದಿದೆ ಈ ಸಂದರ್ಭದಲ್ಲಿ ಕುಡುಕ ಮುರುಗ ಕಂಡೆಕ್ಟರ್ ನನ್ನು ಬಸ್ಸಿನಿಂದ ತಳ್ಳಿ ಪರಾರಿಯಾಗಿದ್ದಾನೆ .
ಬಸ್ಸಿನಿಂದ ಕೆಳಗೆ ಬಿದ್ದ ಕಂಡಕ್ಟರ್ ಪೆರುಮಾಳ್ ತಲೆಗೆ ತೀವ್ರ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಮೇಲ್ಮರುವತ್ತೂರಿನ ಖಾಸಗಿ ಆಸ್ಪತ್ರೆಗೆ ಸೇಎಇಸಿದ್ದಾರೆ ಆದರೂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುತ್ತಾನೆ. ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಕುಡುಕ ಮುರುಗನ್ ನನ್ನು ಬಂಧಿಸಿದ್ದಾರೆ.
ಘಟನೆ ಕುರಿತಾಗಿ ತಿಳಿದುಕೊಂಡ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕರ್ತವ್ಯದಲ್ಲಿ ಮೃತಪಟ್ಟ ಕಂಡಕ್ಟರ್ ಪೆರುಮಾಳ್ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ ಜೊತೆಗೆ 10 ಲಕ್ಷ ರೂಪಾಯಿ ಆರ್ಥಿಕ ನೆರವು ಘೋಷಿಸಿ ಮಾನವಿಯತೆ ಮೆರೆದಿದ್ದಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28