ಶ್ರೀನಿವಾಸಪುರ:-ಸರ್ಕಾರಿ ಶಾಲೆ ಕಾಲೇಜುಗಳ ವಿಧ್ಯಾರ್ಥಿಗಳು ಉನ್ನತ ಪದವಿಗಳನ್ನು ಅಲಂಕರಿಸಿ ಸಮಾಜದ ಶ್ರೇಯಸ್ಸಿಗೆ ದುಡಿಯುತ್ತಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಸಣ್ಣೀರಯ್ಯ ಹೇಳಿದರು ಅವರು ತಮ್ಮ ಕಾಲೇಜಿನಲ್ಲಿ 2020-21 ನೇ ಸಾಲಿನಲ್ಲಿ ವಿಜ್ಞಾನ ವಿಭಾಗದಲ್ಲಿ ಓದಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಮಿಸ್ಬಾ ತಪಸ್ಸುಮ್ ಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ವಿದ್ಯಾಸಂಸ್ಥೆಗಳು ಇತರೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆ ಇಲ್ಲದಂತೆ ಉತ್ತಮ ರೀತಿಯಲ್ಲಿ ಭೋದನಾ ವ್ಯವಸ್ಥೆ ಶೈಕ್ಷಣಿಕ ಸೌಲಭ್ಯಗಳು ಹಾಗು ಇತರೆ ಮೂಲಭೂತ ಸೌಕರ್ಯಗಳು ನೀಡುತ್ತಿದೆ ಇದನ್ನು ವಿದ್ಯಾರ್ಥಿಗಳು ಬಳಸಿಕೊಂಡು ಶೈಕ್ಷಣಿಕವಾಗಿ ಸಾಧನೆ ಮಾಡುವ ಮೂಲಕ ಸಮಾಜದಲ್ಲೂ ಉನ್ನತ ವ್ಯಕ್ತಿತ್ವ ಸ್ಥಾನ ಗೌರವ ಪಡೆಯುವಂತೆ ಹೇಳಿದರು.
ವಿಙ್ಞಾನ ಉಪನ್ಯಾಸಕ ಚಿನ್ನಪ್ಪರೆಡ್ಡಿ ಮಾತನಾಡಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿ ಚಿನ್ನದ ಪದಕ ಪಡೆದಿರುವುದು ಹೆಮ್ಮೆಯ ವಿಷಯ ರಸಾಯನಶಾಸ್ತ್ರದಲ್ಲಿ 100 ಅಂಕಗಳನ್ನು ಪಡೆದಿರುವ ಆಕೆಯ ಸಾಧನೆ ಇತರೆ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕವಾಗಬೇಕು ಎಂದ ಅವರು ಚಿನ್ನದ ಪದಕ ಪಡೆದ ಆಕೆಯ ಶೈಕ್ಷಣಿಕ ಸಾಧನೆಯಿಂದ ಕಾಲೇಜಿಗೆ ಉತ್ತಮ ಹೆಸರು ಬಂದಿದೆ ಭೊಧಕರಾದ ನಮಗೂ ಹೆಮ್ಮೆಯ ವಿಚಾರವಾಗಿದೆ ಸಮಾಜದಲ್ಲಿ ಆಕೆಯ ಪೋಷಕರ ಗೌರವ ಹೆಚ್ಚಿಸಿದೆ ಎಂದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



