ಶ್ರೀನಿವಾಸಪುರ: ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷರಾಗಿ ಹಿರಿಯ ವಕೀಲ ಜಯರಾಮೇಗೌಡ ಕಾರ್ಯದರ್ಶಿಯಾಗಿ ಪಿ.ಸಿ.ನಾರಯಣಸ್ವಾಮಿ ಆಯ್ಕೆಯಾಗಿರುತ್ತಾರೆ ಇಂದು ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆ ನಡೆದು ಅಧ್ಯಕ್ಷ ಕಾರ್ಯದರ್ಶಿ ಹಾಗು ವಿವಿದ ಸ್ಥಾನಗಳಿಗೆ ಆಯ್ಕೆಯಾದರು.
ಶ್ರೀನಿವಾಸಪುರ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಜಯರಾಮೇಗೌಡ,ಪ್ರಧಾನ ಕಾರ್ಯದರ್ಶಿ ಪಿ ಸಿ ನಾರಾಯಣಸ್ವಾಮಿ ಆಯ್ಕೆಯಾಗಿದ್ದು ಉಪಾಧ್ಯಕ್ಷರಾಗಿ ಟಿ ವಿ ನಾರಾಯಣಸ್ವಾಮಿ,ಖಜಾಂಚಿಯಾಗಿ ಜಿ.ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಜಯರಾಮೇಗೌಡ ಮಾತನಾಡಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ 5 ನೇ ಬಾರಿಗೆ ಆಯ್ಕೆಯಾಗಿರುತ್ತೇನೆ,ವಕೀಲರ ಸಮಸ್ಯೆಗಳಿಗೆ ಹಿರಿಯ ಹಾಗೂ ಕಿರಿಯರ ಸಲಹೆ ಸೂಚನೆಗಳನ್ನು ಪಡೆದು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತೇನೆ ಸಂಘವನ್ನು ಇನ್ನಷ್ಟು ಉತ್ತಮವಾಗಿ ಅಭಿವೃದ್ಧಿ ಮಾಡುವುದಾಗಿ ಹೇಳಿದ ಅವರು ನನ್ನ ಆಯ್ಕೆಗೆ ಸಹಕಾರ ನೀಡಿದ ವಕೀಲರ ಸಂಘದ ಸದಸ್ಯರಿಗೆ ಚಿರಋಣಿಯಾಗಿ ಇರುತ್ತೇನೆ ಎಂದರು.ಈ ಸಂದರ್ಭದಲ್ಲಿ ಹಿರಿಯ ವಕೀಲ ಕೊಡಿಚೆರವುನಾರಯಣಸ್ವಾಮಿ,ಶೆಟ್ಟಿಶ್ರೀನಿವಾಸ್,ಕೆ.ಶ್ರೀನಿವಾಸನ್ ಚಲಪತಿ,ಸೌಭಾಗ್ಯವತಿ,ಶ್ರೀನಿವಾಸಗೌಡ ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



