ಶ್ರೀನಿವಾಸಪುರ:ತಾಲೂಕಿನ ರಾಯಲ್ಪಾಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ರಾಯಲ್ಪಾಡು ಗ್ರಾಮದ ಊರಾಚಗಿನ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಸುಮಾರು 4-5 ದಿನಗಳ ಹಿಂದೆ ಮೃತಪಟ್ಟಿರಬಹುದು ಎಂದು ಪೋಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ.
ರಾಯಲ್ಪಾಡು ಗ್ರಾಮದ ಹೊರವಲಯದ ಬಾವಿಯಲ್ಲಿ ಶವ ತೆಲುತ್ತಿರುವ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ರಾಯಲ್ಪಾಡು ಪೊಲೀಸರು ಮೃತ ದೇಹ ಹೊರತಗೆಸಿದ್ದು ಅಂದಾಜು 40 ವರ್ಷದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ,ನೀಲಿ ಬಣ್ಣದ ಶರ್ಟ್ ಹಾಗೂ ಬೆಲ್ಟ್ ಚಪ್ಪಲಿಗಳು ಬಾವಿಯ ದಡದಲ್ಲಿಯೆ ಇದ್ದು ಇದು ಆತ್ಮಹತ್ಯೆ ಇರಬಹುದ ಎನ್ನಲಾಗಿದೆ,ಶವದ ಗುರುತು ಪಡೆಯಲು ಯಾವುದೆ ಪುರಾವೆ ಇಲ್ಲ ಎನ್ನುತ್ತಾರೆ ಪೋಲಿಸರು ಶವವನ್ನು ಕೋಲಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು,ರಾಯಲ್ಪಾಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೆ ವ್ಯಕ್ತಿ ನಾಪತ್ತೆ ಪ್ರಕರಣ ಇಲ್ಲವಾಗಿದ್ದು ಇತರೆ ತಾಲೂಕು ಅಥಾವ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವ್ಯಕ್ತಿ ನಾಪತ್ತೆ ಸಂಭಂದಿತ ಪ್ರಕರಣ ಇದ್ದರೆ ಮಾಹಿತಿ ಪಡೆಯಬಹುದಾಗಿದೆ ಎನ್ನುತ್ತಾರೆ ಪ್ರಕರಣ ದಾಖಲಿಸಿಕೊಂಡಿರುವ ರಾಯಲ್ಪಾಡು ಪೊಲೀಸರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



