ಶ್ರೀನಿವಾಸಪುರ:ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮ ಇದೊಂದು ಉತ್ತಮ ಕಾರ್ಯಕ್ರಮವಾಗಿದೆ ಎಂದು ಶಾಸಕ ವೆಂಕಟಶಿವಾರೆಡ್ಡಿ ಹೇಳಿದರು ಅವರು ಶ್ರೀನಿವಾಸಪುರ ಪಟ್ಟಣದ ತ್ಯಾಗರಾಜ ಬಡಾವಣೆಯಲ್ಲಿರುವಂತ ಕರ್ನಾಟಕ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ(ಬೈರೆಡ್ಡಿ ಸ್ಕೂಲ್)ಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ,ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಹಾಗು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆ ಎಂ ಎಫ್ ಇವರ ಸಹಯೋಗದಲ್ಲಿ ಮದ್ಯಾಹ್ನ ಉಪಹಾರ ಯೋಜನೆಯಡಿ ತಾಲ್ಲೂಕು ಹಂತದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ 1 ರಿಂದ 10 ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರವಾಗಿ ಬಿಸಿ ಹಾಲಿನೊಂದಿಗೆ ಮಿಶ್ರಣಗೊಳಿಸಿ ಶಾಲಾ ಮಕ್ಕಳಿಗೆ ವಿತರಣೆ ಮಾಡುವಂತ ಕಾರ್ಯಕ್ರಮವನ್ನು ಸಧ್ಯ ಈಗ ವಾರಕ್ಕೆ ಮೂರು ದಿನ ನೀಡುತ್ತಿದ್ದು ಅದನ್ನು ವಾರದ 6 ದಿನಗಳು ನೀಡಿದರೆ ಒಳ್ಳೆಯದು ಎಂದು ಹೇಳಿದ ಅವರು ಸರ್ಕಾರಿ ಶಾಲೆಗಳ ಮಕ್ಕಳು ಯಾವುದೇ ರೀತಿಯ ಆಪೌಷ್ಠಿಕತೆಯಿಂದ ಬಳಲಬಾರದು ಎಂದು ಕೇಂದ್ರ ಸರ್ಕಾರ ಅತುತ್ಯಮವಾದ ಕಾರ್ಯಕ್ರಮ ರೂಪಿಸಿದೆ ಎಂದರು.
ಈ ಸಂದರ್ಭದಲ್ಲಿ ಪಿಎಂ ಪೋಷಣ್ ರಾಗಿ ಹೆಲ್ತ್ ಮಿಕ್ಸ್ ಹಾಲು ವಿತರಣೆ ಮಾಡಲಾಯಿತು,ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮತ್ತು ಕೆ ಎಂ ಎಫ್ ಸಮಸ್ಥೆಗೆ ಶಾಸಕ ಧನ್ಯವಾದ ತಿಳಿಸಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಇಒ ಶಿವಕುಮಾರಿ,ಶಾಲ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದರೆಡ್ಡಿ, ಯುವ ಮುಖಂಡ ಕಂಬಾಲಪಲ್ಲಿ ಶ್ರೀನಿವಾಸರೆಡ್ಡಿ,ಶಾಲೆಯ ಮುಖ್ಯ ಶಿಕ್ಷಕ ಬೈರೇಗೌಡ,ಶ್ರೀನಿವಾಸ್ ಸೇರಿದಂತೆ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



