ಶ್ರೀನಿವಾಸಪುರ: ಮಾನಸೀಕವಾಗಿ ಮನನೊಂದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರು ಹೋಬಳಿ ಶಿಗಪಲ್ಲಿ@ಶೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾನು ನೇಣಿಗೆ ಶರಣಾದ ತಂದೆಯೊಬ್ಬನ ಕಥೆ,ಕೃಷಿ ಕಾರ್ಮಿಕನಾಗಿದ್ದ ಶಿಗಪಲ್ಲಿ ನಾರಾಯಣಸ್ವಾಮಿ (40) ಹೆಂಡತಿ ಹಾಗು ಇಬ್ಬರು ಮಕ್ಕಳೊಂದಿಗೆ ಗ್ರಾಮದಲ್ಲಿಯೇ ವಾಸವಾಗಿದ್ದ ಇತ್ತಿಚಿಗೆ ಗಂಡ ಹೆಂಡತಿ ನಡುವೆ ಅನ್ಯೊನ್ಯತೆ ಕಡಿಮೆಯಾಗಿ ಪತ್ನಿ ಕಾಣೆಯಾಗುತ್ತಾಳೆ, ಈ ಬಗ್ಗೆ ಗ್ರಾಮದಲ್ಲಿ ಹಲವಾರು ಉಹಾಪೋಹಗಳು ಹರಡುತ್ತವೆ,ನಂತರದ ಬೆಳವಣಿಗೆಯಲ್ಲಿ ಆಕೆ ಕೋಲಾರದ ಬಳಿ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿರುವುದಾಗಿ ಹೇಳುತ್ತಾರೆ,ಇತ್ತ ನಾರಯಣಸ್ವಾಮಿ ಬಗ್ಗೆ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಹಳೆಯ ಪ್ರಕರಣಕ್ಕೆ ಸಂಬಂದಿಸಿದಂತೆ ದೂರು ಇದ್ದು ಪೋಲಿಸರು ಕರೆದಾಗ ಠಾಣೆಗೆ ಹೋಗಿಬರುತ್ತಿದ್ದ, ಹೀಗೆ ಹಲವಾರು ರಿತಿಯಲ್ಲಿ ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದ ಆತ ತನ್ನ ಇಬ್ಬರು ಮಕ್ಕಳಾದ ಪವನ್ (12) ಮತ್ತು ನಿತಿನ್ (10) ವಿಷ ಕುಡಿಸಿ ತಾನು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸುತ್ತಾರೆ.
ಈ ಸಂಬಂಧ ಶ್ರೀನಿವಾಸಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಇನ್ಸಪೇಕ್ಟರ್ ಗೊರವನಕೊಳ್ಳ ಭೇಟಿ ನೀಡಿರುತ್ತಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



