ಶ್ರೀನಿವಾಸಪುರ:ಶ್ರೀನಿವಾಸಪುರ ತಹಶೀಲ್ದಾರ್ ಅವರ ನೂತನ ಮಹೇಂದ್ರ ಜೀಪಿಗೆ ಖಾಸಗಿ ಬಸ್ ಡಿಕ್ಕಿ ಹೋಡೆದಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ,
ಘಟನೆ ಕೋಲಾರ-ಶ್ರೀನಿವಾಸಪುರ ರಸ್ತೆಯ ಚೆಲ್ದಿಗಾನಹಳ್ಳಿ ಹತ್ತಿರದ ಬೈಪಾಸ್ ಬಳಿ ನಡೆದಿದ್ದು ಮಂಗಳವಾರ ಸಂಜೆ ಕೋಲಾರ ದಿಂದ ಬರುತ್ತಿದ್ದ ಷರಿಫ್ ಬಸ್ ಒವರ್ ಟೇಕ್ ಮಾಡಿಕೊಂಡು ಮುಂದೆ ಸಾಗಿರುತ್ತದೆ ಅದರ ಹಿಂದೆ ಗಾರ್ಮೇಂಟ್ ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಖಾಸಗಿ ಬಸ್ ಮುಂದೆ ನುಗ್ಗಿರುತ್ತದೆ ಅದೆ ಸಮಯಕ್ಕೆ ಶ್ರೀನಿವಾಸಪುರ ತಹಶೀಲ್ದಾರ್ ಸುಧೀಂದ್ರ ರವರು ಇದ್ದ ಮಹಿಂದ್ರಾ ಜೀಪು ಬಂದಿದ್ದು ಬಸ್ಸು ಜಿಪೀಗೆ ಡಿಕ್ಕಿ ಹೊಡೆದು ಅಪಘಾತ ಆಗಿದೆ. ಬಸ್ ಹಿಂದೆ ಬರುತ್ತಿದ್ದ ದ್ವಿಚಕ್ರ ವಾಹನ ಸವಾರ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಅಪಘಾತದಿಂದ ಜೀಪು ಟಯರ್ ಬ್ಲಾಸ್ಟ್ ಆಗಿದ್ದು ವಾಹನದ ಮುಂಬಾಗ ಸ್ವಲ್ಪಮಟ್ಟಿಗೆ ಜಕಂ ಆಗಿದೆ. ಜೀಪಿನಲ್ಲಿದ್ದ ತಹಶೀಲ್ದಾರ್ ಸುಧೀಂದ್ರ ಸೇಫ್ ಆಗಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



