ಶ್ರೀನಿವಾಸಪುರ : ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿವೇತನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಶ್ರೀನಿವಾಸಪುರ ತಾಲೂಕು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ವಿದ್ಯಾರ್ಥಿಗಳಿಗೆ ಕರೆ ಇತ್ತಿದ್ದಾರೆ.
2024-25 ನೇ ಸಾಲಿನಲ್ಲಿ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯುವ ಸಲುವಾಗಿ ದಿನಾಂಕ: 01.09.2024 ರಿಂದ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಅವರನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ಸಮಾಜ ಕಲಾಣ ಇಲಾಖೆಯಿಂದ ಮೆಟ್ರಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಹಾಗೂ ಪ್ರೋತ್ಸಾಹಧನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ವಿದ್ಯಾರ್ಥಿವೇತನವನ್ನು ಅರ್ಹ ಫಲಾನುಭವಿಗಳಿಗೆ ಇ-ಆಡಳಿತ ಕೇಂದ್ರದವರು ರೂಪಿಸಿ ಸಿದ್ಧಪಡಿಸಿರುವ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಮಂಜೂರು ಮಾಡಲಾಗುತ್ತಿದೆ. ಸದರಿ ವಿದ್ಯಾರ್ಥಿವೇತನ ಕಾರ್ಯಕ್ರಮಗಳಲ್ಲಿ ವರ್ಷದಿಂದ ವರ್ಷಕ್ಕೆ ಫಲಾನುಭವಿಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದ್ದು ಅದರಲ್ಲೂ ಮುಖ್ಯವಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಕುಸಿತ ಕಾಣುತ್ತಿದೆೀ ಕಾರಣದಿಂದ ಸದರಿ ಕಾರ್ಯಕ್ರಮಗಳ ಬಗ್ಗೆ ಫಲಾನುಭವಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಆಯೋಜಿಸಿರುವುದಾಗಿ ಹೇಳಿದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



