ಶ್ರೀನಿವಾಸಪುರ:ಇದೊಂದು ಹೃದಯ ವಿದ್ರಾಯಕ ಮನ ಕಲಕುವ ಘಟನೆ ನಡೆದಿದ್ದು ಹುಟ್ಟಿದ ಏಳೇ ದಿನಕ್ಕೆ ಹೆತ್ತವರನ್ನು ಕಳೆದುಕೊಂಡ ಕಂದಮ್ಮನ ಕಥೆ.
ಹೆತ್ತ ಏಳು ದಿನದ ಹಸುಕಂದನನ್ನು ಅನಾಥವಾಗಿಸಿ ಅಸ್ಸಾಂ ಮೂಲದ ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗುವಿನ ಜನನದ ಸಂಭ್ರಮ ಮಾಸುವ ಮುನ್ನವೇ ಆತ್ಮಹತ್ಯೆ ಮಾಡಿಕೊಂಡಿರುವ ಮಗುವಿನ ಹೆತ್ತವರು ಕೃತ್ಯ ಮರುಕ ಮೂಡಿಸಿದೆ.
ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ಶ್ರೀನಿವಾಸರೆಡ್ಡಿ ಎಂಬುವವರ ಕೋಳಿ ಫಾರಂನಲ್ಲಿ ಕೆಲಸಕ್ಕಾಗಿ ದೂರದ ಅಸ್ಸಾಂನಿಂದ ಬಂದಿದ್ದ ಫರಿಜಾ (22) ಮತ್ತು ರೆಹಮಾನ್ (28) ದಂಪತಿ ಸುಮಾರು ಹದಿನೈದು ದಿನಗಳಿಂದ ಫಾರಂ ಸಮೀಪ ವಾಸವಾಗಿದ್ದರು. ಸರಿಯಾಗಿ ಏಳು ದಿನಗಳ ಹಿಂದಷ್ಟೇ ಫರಿಜಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಬದುಕಿಲ್ಲಿ ಸಂತಸ ಪಡಬೇಕಿದ್ದ ಸಮಯದಲ್ಲಿ ದಂಪತಿ ಆತ್ಮಹತ್ಯೆಯಂತ ವಿಪರೀತ ನಿರ್ಧಾರಕ್ಕೆ ಮುಂದಾಗಲು ಕಾರಣವಾದರು ಏನು ಎಂಬುದು ಸ್ಥಳೀಯರ ಪ್ರಶ್ನೆ?
ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಘಟನಾ ಸ್ಥಳಕ್ಕೆ ರಾಯಲ್ಪಾಡು ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶ್ರೀನಿವಾಸಪುರ ಆಸ್ಪತ್ರೆಗೆ ರವಾನಿಸಲಾಗಿದೆ.ಮಗುವನ್ನು ಕೋಲಾರ ಜಿಲ್ಲಾಸ್ಪತ್ರೆಗೆ ರವಾನಿಸಿ ಪೋಷಣೆ ಮಾಡಲಾಗುತ್ತಿದ್ದು ಸಂಬಂಧಿಕರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



