ಚಿಂತಾಮಣಿ:ಚಿಂತಾಮಣಿ-ಹೊಸಕೋಟೆ ಹೆದ್ದಾರಿಯಲ್ಲಿ APSRTC ಬಸ್ಸು ಹಾಗೂ ಸಿಲಿಂಡರ್ ತುಂಬಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆ ಸಂತೇಕಲ್ಲಹಳ್ಳಿ ಗೇಟ್ ಸಮೀಪ ಇಂದು ನಡೆದಿದೆ.
ಆಂಧ್ರದ ಕಡಪದಿಂದ ಬೆಂಗಳೂರಿಗೆ ಹೋಗುತ್ತಿದ್ದ ಆಂಧ್ರದ ಸಾರಿಗೆ ಸಂಸ್ಥೆ ಬಸ್ಸು ಮತ್ತು ಚಿಂತಾಮಣಿ ಕಡೆಗೆ ಬರುತ್ತಿದ್ದ ಸಿಲಿಂಡರ್ ತುಂಬಿದ್ದ ಲಾರಿ ಸಂತೇಕಲ್ಲಹಳ್ಳಿ ಗೇಟ್ ಸಮೀಪ ಡಿಕ್ಕಿಯಾಗಿದೆ ಲಾರಿಯಲ್ಲಿದ್ದ ನೂರಾರು ಅಡುಗೆ ಸಿಲಿಂಡರ್ ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣ ನಷ್ಟದ ಅನಾಹುತ ಸಂಭವಿಸಿಲ್ಲ.
ಬಸ್ಸಿನಲ್ಲಿದ್ದ ನಿತ್ಯ ಪೂಜಿತ್(19 ವರ್ಷ)ಅರುಣಮ್ಮ(40 ವರ್ಷ)ವೆಂಕಟೇಶ್ (60 ವರ್ಷ) ಇವರು ಗಾಯಗೊಂಡು ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಂಭೀರವಾಗಿ ಗಾಯಗೊಂಡ ಗಾಯಾಳುಗಳು ಹೊಸಕೋಟೆ ಸೇರಿದಂತೆ ಇತರೆ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು,ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮುರುಳಿಧರ್, ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸಪೇಕ್ಟರ್ ಶಿವರಾಜ್,ನಗರ ಠಾಣೆ ಇನ್ಸಪೇಕ್ಟರ್ ವಿಜಿಕುಮಾರ್, ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ನಡೆದಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಎಂ ಸಿ ಸುಧಾಕರ್ ತಮ್ಮ ಕಾರು ನಿಲ್ಲಿಸಿ ಘಟನೆ ಬಗ್ಗೆ ಮಾಹಿತಿ ಪಡೆದು ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲು ಸಹಕಾರ ನೀಡಿದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



