ಬೆಂಗಳೂರು:ಬೆಂಗಳೂರು ನಗರದ ಹೊರವಲಯ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಲವು ದಿನಗಳಿಂದ ಸಾರ್ವಜನಿಕವಾಗಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಕೆಲ ದಿನಗಳ ಹಿಂದೆ ಚಿರತೆಯೊಂದು ಹೆದ್ದಾರಿ ಕ್ರಾಸ್ ಮಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದರೊಂದಿಗೆ ಐಟಿಬಿಟಿಗೆ ಖ್ಯಾತಿ ಪಡೆದು ಹಲವಾರು ಸಾಫ್ಟ್ವೇರ್ ಸಂಸ್ಥೆಗಳು ಇರುವ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸ್ಥಳೀಯರು ಹಾಗೂ ಟೆಕ್ಕಿಗಳು ಆತಂಕಕ್ಕೆ ಒಳಗಾಗಿದ್ದರು.
ಚಿರತೆ ಓಡಾಟದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕ್ಯಾಮರಾಗಳನ್ನ ಅಳವಡಿಸಿ ಚಿರತೆ ಓಡಾಟದ ಬಗ್ಗೆ ನಿಗಾ ವಹಿಸಿದ್ದರು.ಕ್ಯಾಮೆರಾದಲ್ಲಿ ಹಲವು ಕಡೆಗಳಲ್ಲಿ ಚಿರತೆ ಓಡಾಟ ಕಂಡು ಬಂದಿದ್ದು ಅದರ ಜಾಡು ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿ ಮೂರು ಬೋನ್ ಗಳನ್ನ ಇಟ್ಟು ಸೆರೆಗೆ ಕಾರ್ಯಾಚರಣೆ ನಡೆಸಿದ್ದರು. ಎಲೆಕ್ಟ್ರಾನಿಕ್ ಸಿಟಿಯ ಎಲಿಪ್ಯಾಡ್ ಜಾಗದಲ್ಲಿ ಹೆಚ್ಚಾಗಿ ಓಡಾಡುತ್ತಿದ್ದ ಚಿರತೆ, ಅಲ್ಲಿ ನಿರ್ಜನ ಪ್ರದೇಶದಲ್ಲಿಯೇ ಹೆಚ್ಚಾಗಿ ಬಿಡುಬಿಟ್ಟಿರುವುದು ಖಚಿತವಾಗಿ ಎಲಿಪ್ಯಾಡ್ ಜಾಗದಲ್ಲಿ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.ಬೋನಿಗೆ ಬಿದ್ದಿರುವ ಚಿರತೆಗೆ ಐದು ವರ್ಷದ ಗಂಡು ಚಿರತೆ ಎಂದು ಅರಣ್ಯ ಇಲಾಖೆ ಗುರುತಿಸಿದ್ದು ಸೆರೆಯಾಗಿರುವ ಚಿರತೆಯನ್ನು ಬನ್ನೆರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲು ಚಿಂತನೆ ನಡೆಸಿದೆ
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



