ನ್ಯೂಜ್ ಡೆಸ್ಕ್: ರಾಜಸ್ಥಾನ ಕಾಂಗ್ರೆಸ್ ನಲ್ಲಿ ಜೊಡೆತ್ತುಗಳಾಗಿ ಕಾರ್ಯನಿರ್ವಹಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದ ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ಹಾಲಿ ಮುಖ್ಯಮಂತ್ರಿ ಅಶೋಕ ಗೆಲ್ಲೋಟ್ ಹಾಗು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ನಡುವೆ ಅಧಿಕಾರ ಹಂಚಿಕೆ ನಿಲ್ಲದ ಸಮರವಾಗಿತ್ತು ಈಗ ಅದು ತಾರಕಕ್ಕೆ ತಲುಪಿದ್ದು ಮುಖ್ಯಮಂತ್ರಿ ಅಶೋಕ ಗೆಲ್ಲೋಟ್ ಜೊತೆ ತೀವ್ರ ಭಿನ್ನಾಭಿಪ್ರಾಯ ಹೊಂದಿರುವ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕಾಂಗ್ರೆಸ್ ಸಂಬಂಧ ಕಡಿದುಕೊಂಡಿದ್ದಾರೆ ಈಗ ತಮ್ಮದೇ ಮಾರ್ಗದಲ್ಲಿ ಸಾಗಲು ತಯಾರಿ ನಡೆಸುತ್ತಿರುವ ಪೈಲಟ್ ರಾಜಾಸ್ಥಾನದ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಇರುವಾಗ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ನೂತನ ಪಕ್ಷ ಸ್ಥಾಪನೆ ಪ್ರಕ್ರಿಯೆಯಲ್ಲಿ ರಾಜಕೀಯ ಮಹಾ ತಂತ್ರಗಾರ ಪ್ರಶಾಂತ ಕಿಶೋರ ಅವರ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ ಸಚಿನ್ ಪೈಲಟ್ ಗೆ ನೆರವಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ.
ರಾಜೇಶ್ ಪೈಲಟ್ ಅವರ ತಂದೆಯ ಪುಣ್ಯತಿಥಿ ಜೂ.11ರಂದು ಪೈಲಟ್ ನೂತನ ಪಕ್ಷ ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ ಪಕ್ಷದ ಹೆಸರು “ಪ್ರಗತಿಶೀಲ ಕಾಂಗ್ರೆಸ್” ಎನ್ನುವ ಹೆಸರಿನಲ್ಲಿ ಚುನಾವಣಾ ಅಖಾಡಕ್ಕೆ ಇಳಿಯುವ ಸಾಧ್ಯತೆಯೂ ಇದಿಯಂತೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



