ನ್ಯೂಜ್ ಡೆಸ್ಕ್:ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಮಹಿಳಾ ಟ್ರೈನಿ ವೈದ್ಯೆಯ ಮೇಲೆ ನಡೆದಿರುವ ಸಾಮೂಹಿಕ ಹತ್ಯಾಚಾರ ದೇಶದಲ್ಲಿ ದೊಡ್ದ ಮಾಡಿದ್ದು ಅದು ಮಾಸುವ ಮುನ್ನವೆ ಉತ್ತರಪ್ರದೇಶದಲ್ಲಿ ಒಂಟಿಯಾಗಿ ಹೋಗುತ್ತಿದ್ದ ನರ್ಸ್ ಮೇಲೆ ಹಲ್ಲೆ ನಡೆಸಿ ನಂತರ ಪೊದೆಯೊಳಗೆ ಎಳೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಧಾರುಣ ಘಟನೆ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಬಿಲಾಸಪುರ ಪೊಲೀಸರ ಪ್ರಕಾರ ಉತ್ತರಾಖಂಡದ ಖಾಸಗಿ ಆಸ್ಪತ್ರೆಯಿಂದ ಉತ್ತರ ಪ್ರದೇಶದ ಗಡಿ ಬಳಿಯ ತನ್ನ ಮನೆಗೆ ಹಿಂದಿರುಗುತ್ತಿದ್ದ ನರ್ಸ್ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈಯಲಾಗಿದೆ. 33 ವರ್ಷದ ಮಹಿಳೆ ತನ್ನ 11 ವರ್ಷದ ಮಗಳೊಂದಿಗೆ ಬಿಲಾಸ್ಪುರದ ಬಾಡಿಗೆ ಮನೆಯಲ್ಲಿ ವಾಸವಿದ್ದು ಅವರು ರುದ್ರಪುರದ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು ಜುಲೈ 30ರಂದು ಕರ್ತವ್ಯ ಮುಗಿಸಿ ಮನೆಗೆ ಹೋಗುತ್ತಿರುವಾಗ ಘಟನೆ ನಡೆದಿದೆ.
ರಾತ್ರಿಯಾದರು ಮನೆಗೆ ಬಾರದೆ ಇದ್ದ ಕಾರಣ ಮೃತಳ ಸಹೋದರಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಎಂಟು ದಿನಗಳ ನಂತರ ದಿಬ್ದಿಬಾ ಗ್ರಾಮದ ಆಕೆಯ ಮನೆಯಿಂದ ಸುಮಾರು 1.5 ಕಿಮೀ ದೂರದಲ್ಲಿರುವ ಖಾಲಿ ಜಾಗದಲ್ಲಿ ಆಗಸ್ಟ್ 7 ರಂದು ಆಕೆಯ ಶವ ಪತ್ತೆಯಾಗಿದೆ. ಶವಪರೀಕ್ಷೆಯಲ್ಲಿ ಆಕೆ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.ಆಕೆಯ ಫೋನ್ ಸಿಗ್ನಲ್ ಗಳು ರಾಜಸ್ಥಾನದಿಂದ ಬಂದಿರುವುದು ವಿಚಾರಣೆಯಲ್ಲಿ ತಿಳಿದು ಬಂದು ಪೊಲೀಸರು ರಾಜಸ್ಥಾನಕ್ಕೆ ತೆರಳಿ ಆರೋಪಿ ಧರ್ಮೇಂದ್ರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಧರ್ಮೇಂಧ್ರ ಉತ್ತರ ಪ್ರದೇಶದ ಬರೇಲಿಯ ದಿನಗೂಲಿ ಕಾರ್ಮಿಕನಾಗಿದ್ದು ಅವನನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ.
ಕುಡಿದ ಅಮಲಿನಲ್ಲಿದ್ದ ಧರ್ಮೇಂದ್ರ ಸಂತ್ರಸ್ತೆಯನ್ನು ನೋಡಿ ಆಕೆಯನ್ನು ಹಿಂಬಾಲಿಸಿದ್ದಾನೆ. ನಂತರ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಆಕೆಯನ್ನು ಪೊದೆಯೊಂದಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಆಕೆಯ ಫೋನ್ ಮತ್ತು ಆಕೆಯ ಪರ್ಸ್ನಲ್ಲಿದ್ದ 3,000 ರೂ. ಕದ್ದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
Breaking News
- ನಾಗಮಂಗಲ ಗಲಭೆ ಸಂಬಂಧ ಕೇರಳದ ಇಬ್ಬರ ಬಂಧನ!
- J&Kಚುನಾವಣೆ ವೇಳೆ ಎನ್ಕೌಂಟರ್ ಮೂವರು ಉಗ್ರರ ಹತ್ಯೆ ಇಬ್ಬರು ಸೈನಿಕರ ವೀರ ಮರಣ!
- BIGSHOK ಏರಿಕೆಯಾದ ಅಡುಗೆ ಎಣ್ಣೆ ರೇಟು!
- ಶ್ರೀನಿವಾಸಪುರದ KSRTC ಗಣೇಶ ವಿಸರ್ಜನೆ
- ಶ್ರೀನಿವಾಸಪುರದ ಯುವಕ ಗೋಕರ್ಣದಲ್ಲಿ ಸಮುದ್ರದಪಾಲು
- ಮದನಪಲ್ಲಿ-ತಿರುಪತಿ ಘಾಟ್ ರಸ್ತೆಯಲ್ಲಿ ಅಪಘಾತ ಕರ್ನಾಟಕದ ನಾಲ್ವರ ಸಾವು!
- ಕಮ್ಯುನಿಸ್ಟ್ ಧ್ವನಿ ಸೀತಾರಾಂ ಯೆಚೂರಿ ಇನ್ನಿಲ್ಲ!
- ಚಿಂತಾಮಣಿ ನಗರಸಭೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ
- ಅಮೇರಿಕಾದಲ್ಲಿ ರಾಹುಲ್-ಶಿವಕುಮಾರ್ ಭೇಟಿ ರಾಜಕೀಯ ಸಂಚಲನ
- ಮೃತ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ ಸಿಎಂ
Tuesday, September 17