ಶ್ರೀನಿವಾಸಪುರ:ಚಲಿಸುತ್ತಿದ್ದ ಲಾರಿಗೆ ಸಿಲುಕಿ ದ್ವಿಚಕ್ರ ವಾಹನ ನಡೆಸುತ್ತಿದ್ದ ಯುವಕನೊಬ್ಬ ಸ್ಥಳದಲ್ಲೆ ಮೃತ ಪಟ್ಟ ಘಟನೆ ತಾಲೂಕಿನ ಗೌವನಪಲ್ಲಿ ಪೋಲಿಸ್ ಠಾಣೆ ವ್ಯಾಪ್ತಿಯ ಲಕ್ಷ್ಮಿಪುರ ಕ್ರಾಸ್ ನಲ್ಲಿ ಜಿಯೋ ಪೆಟ್ರೊಲ್ ಬಂಕ್ ಬಳಿ ನಡೆದಿದೆ, ಮೃತ ಯುವಕನನ್ನು ಆಂಧ್ರದ ಅನಮಯ್ಯ ಜಿಲ್ಲೆಯ ರಾಜಂಪೇಟ ಮಂಡಲ್ ಬೇಗಂಪೇಟ ನಿವಾಸಿ ದುರ್ಗಾಪ್ರಸಾದ್ (25) ಎಂದು ಗುರುತಿಸಲಾಗಿದೆ.
ಮೃತ ದ್ವಿಚಕ್ರ ವಾಹನ ಸವಾರ ಆಂಧ್ರದ ನಿವಾಸಿಯಾಗಿದ್ದು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್(software)ಆಗಿ ಕೆಲಸ ಮಾಡುತಿದ್ದು ಭಾನುವಾರ ಬೆಂಗಳೂರಿಗೆ ಹೋಗಲು ಕಳೆದ ಆರು ತಿಂಗಳ ಹಿಂದೆ ಖರೀದಿ ಮಾಡಿದ್ದ ದ್ವಿಚಕ್ರ ವಾಹನದಲ್ಲಿ ಹೋಗುತಿದ್ದ ಈ ಸಂದರ್ಭದಲ್ಲಿ ಲಕ್ಷ್ಮಿಪುರ ಕ್ರಾಸ್ ನಲ್ಲಿ ತೆರಳುವಾಗ ಬಂಕ್ ನಲ್ಲಿ ಡೀಸಲ್ ತುಂಬಿಸಿಕೊಂಡು ರಸ್ತೆಗೆ ಬರುತ್ತಿದ್ದ ಲಾರಿಗೆ ಡಿಕ್ಕಿಹೊಡೆದಿರುತ್ತಾನೆ,ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಅನಾಮತ್ತು ಲಾರಿಗೆ ಕೆಳೆಗೆ ಬಿದ್ದಿರುತ್ತಾನೆ ದ್ವಿಚಕ್ರ ವಾಹನ ರಸ್ತೆಗೆ ಬದಿಗೆ ಬಿದ್ದಿರುತ್ತದೆ,ಲಾರಿ ಹಿಂಬದಿ ಚಕ್ರಕ್ಕೆ ಸಿಲುಕಿದ ದ್ವಿಚಕ್ರ ವಾಹನ ಸವಾರ ಪ್ರಸಾದ್ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೆ ಪ್ರಾಣ ಬಿಟ್ಟಿರುತ್ತಾನೆ.ದ್ವಿಚಕ್ರ ವಾಹನ ಸವಾರ ಹೆಲ್ಮೆಟ್ ಧರಿಸಿದ್ದನಾದರು ಲಾಕ್ ಮಾಡದ ಕಾರಣ ಹೆಲ್ಮೆಟ್ ಹೊರಗೆ ಬಂದು ತಲೆಗೆ ತೀವ್ರವಾಗಿ ಪೆಟ್ಟಾಗಿದೆ ಎಂದು ಅಂದಾಜಿಸಲಾಗಿದೆ.
ಅಪಘಾತ ಸ್ಥಳಕ್ಕೆ ಗ್ರಾಮಾಂತರ ವೃತ್ತ ನೀರಿಕ್ಷಕ ಜಯಾನಂದ್ ಮತ್ತು ಗೌನಿಪಲ್ಲಿ ಪೊಲೀಸ್ ಠಾಣಾಧಿಕಾರಿ ರಾಮ್ ಭೇಟಿ ಪರಶೀಲಿಸಿದ್ದು ಮೃತ ದೇಹವನ್ನು ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



