ಬೆಂಗಳೂರು:ಅಮ್ಮ, ಅಜ್ಜಿ ಹಾಗೂ ಮಾವನನ್ನು ಕೊಂದ ಯುವಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಮತ್ತು ಮಾವ ಸತೀಶ ಅವರನ್ನು ಪ್ರಶಾಂತ್ ಯುವಕ ಕೊಲೆ ಮಾಡಿದ್ದು ನಂತರ ಆತ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಆರೋಪಿ ಕ್ಯಾಬ್ ಚಾಲಕನಾಗಿದ್ದು ಆತನ ತಾಯಿ ಮಂಗಳಮ್ಮ ಗಾರ್ಮೆಂಟ್ಸ್ ಉದ್ಯೋಗಿ ಅಜ್ಜಿ ನಂಜಮ್ಮ ಪೌರಕಾರ್ಮಿಕರಾಗಿದ್ದರೆ ಮಾವ ಸತೀಶ್ ಪ್ಲಂಬರ್ ಕೆಲಸ ಮಾಡುತ್ತ ಜೀವನ ಮಾಡುತ್ತಿದ್ದರು
ಕುಟುಂಬಸ್ಥರು ಕಳೆದ ಏಳೆಂಟು ವರ್ಷದಿಂದ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಆರೋಪಿ ಪ್ರಶಾಂತ್ ಕಳೆದ ಒಂದು ವರ್ಷದಿಂದ ಕೆಲಸಕ್ಕೆ ಹೋಗುತ್ತಿರಲಿಲ್ಲ ಎನ್ನಲಾಗಿದ್ದು ಕುಟುಂಬದ ಹಿರಿಯ ಆರೋಪಿ ತಂದೆ ಕೆಲಸಕ್ಕೆಂದು ಹೋರ ಹೋಗಿದ್ದಾಗ ಪ್ರಶಾಂತ್ ಮೂವರನ್ನ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಗೆ ಕಾರಣ ಗೊತ್ತಾಗಿಲ್ಲ. ಕೃತ್ಯ ಎಸಗಿದ ಬಳಿಕ ಆರೋಪಿ ಪರಾರಿಯಾಗಲು ಯತ್ನಿಸಿದ್ದನಾದರೂ ಮನೆ ಮಾಲೀಕ ಹಾಗೂ ಸ್ಥಳೀಯರು ಆರೋಪಿಯನ್ನು ಹಿಡಿದು ಕೊಠಡಿಯಲ್ಲಿ ಕೂಡಿ ಹಾಕಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಆರೋಪಿ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



