ಕೋಲಾರ:ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ಅಥಾವ ವಿಸ್ತರಣೆಯಾದರೆ ಕೋಲಾರ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು. ಜಿಲ್ಲೆಯಲ್ಲಿ ನಾಲ್ವರು ಕಾಂಗ್ರೆಸ್ ಶಾಸಕರಿದ್ದು ಅದರಲ್ಲಿ ನನಗೆ ಮಂತ್ರಿ ಸ್ಥಾನ ನೀಡಬೇಕು. ಅದಕ್ಕೆ ನಾನು ಅರ್ಹನಿದ್ದೇನೆ ಎಂದು ಮಾಲೂರು ಶಾಸಕ ಕೆ ವೈ ನಂಜೇಗೌಡ ಮಾಧ್ಯಮದವರ ಬಳಿ ಹೇಳಿಕೊಂಡಿದ್ದಾರೆ.
ಮಾಲೂರು ತಾಲೂಕಿನಲ್ಲಿ ಕಾಂಗ್ರೆಸ್ ಕಟ್ಟಿ ಬೆಳೆಸಿದ್ದೇನೆ. ತುಂಬಾ ಕಷ್ಟದಲ್ಲಿ ಎರಡನೇ ಬಾರಿಗೆ ಆಯ್ಕೆಯಾಗಿದ್ದೇನೆ. ಕೋಲಾರ ಜಿಲ್ಲೆಯ ಶಾಸಕರು ಮಂತ್ರಿ ಸ್ಥಾನ ಕೇಳಿದ್ದೇವೆ. ಜಿಲ್ಲೆಯ ಯಾರಿಗೆ ಸಚಿವ ಸ್ಥಾನ ಕೊಟ್ಟರು ನನಗೆ ಒಪ್ಪಿಗೆ ಇದೆ. ಮಂತ್ರಿ ಸ್ಥಾನ ನೀಡುವ ಕುರಿತ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಡುತ್ತೆವೆ ಎಂದು ಶಾಸಕ ಕೆ ವೈ ನಂಜೇಗೌಡ ತಿಳಿಸಿದರು.
ಸಂಪುಟ ಪುನರ್ ರಚನೆ ಅಥಾವ ವಿಸ್ತರಣೆ ಇಲ್ಲ
ಸದ್ಯ ರಾಜ್ಯದಲ್ಲಿ ಯಾವುದೇ ಸಚಿವ ಸಂಪುಟ ಪುನರ್ ರಚನೆ ಹಾಗೂ ವಿಸ್ತರಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಆದರೆ ಕೋಲಾರ ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ನಾನು ಕೂಡ ಸಚಿವ ಸ್ಥಾನಕ್ಕೆ ಅರ್ಹನಿದ್ದೇನೆ ಎಂದು ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



