ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ.ಆಂಧ್ರದಲ್ಲಿ ಕಾಂಗ್ರೆಸ್ ಗೆ ಪುನಃ ವೈಭವ ತರಲು ತನಗೆ ಅಧಿಕಾರ ನೀಡಿ ಇದಕ್ಕಾಗಿ ರಾಜ್ಯಸಭೆ ಸೀಟು ನೀಡಿ ಎಂಬ ಬೇಡಿಕೆಗೆ ಸ್ಪಂದಿಸಿರುವ ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಿಂದ ರಾಜ್ಯಸಭೆಗೆ ವೈ.ಎಸ್. ಶರ್ಮಿಳಾ ಅವರನ್ನು ರಾಜ್ಯಸಭೆಗೆ ಕಳಿಸಲು ಎಐಸಿಸಿ ಚರ್ಚೆ ನಡೆಯುತ್ತಿದಿಯಂತೆ.
ನ್ಯೂಜ್ ಡೆಸ್ಕ್:ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸಲು ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು ನಡೆಸುತ್ತಿರುವಾಗಲೆ ಆಂಧ್ರದ ಮಾಜಿ ಮುಖ್ಯಮಂತ್ರಿ ದಿವಂಗತ.ವೈಎಸ್ ರಾಜಶೇಖರರೆಡ್ದಿ ಪುತ್ರಿ ಆಂಧ್ರಪ್ರದೇಶ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಸ್ಪೋಟಕ ವಿಷಯ ಹೊರಬಂದಿದೆ.
ಈ ತಿಂಗಳ 18 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲಾ ಆಕಾಂಕ್ಷಿಗಳು ಸಂಸದ/ರಾಜ್ಯಸಭೆ ಹುದ್ದೆಗೆ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ 136 ಶಾಸಕರ ಬಲ ಹೊಂದಿದೆ. ಕಾಂಗ್ರೆಸ್ ಪಕ್ಷ ರಾಜ್ಯದಿಂದ ಕನಿಷ್ಠ ಮೂವರನ್ನು ರಾಜ್ಯಸಭೆಗೆ ಕಳುಹಿಸುವ ಅವಕಾಶ ಇದ್ದು ಇದಕ್ಕಾಗಿ ರಾಜ್ಯಸಭೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಶ್ರಮಿಸುತ್ತಿದೆ.ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜ್ಯಸಭಾ ಸದಸ್ಯತ್ವ ಅವಧಿ ಮುಗಿಯುತ್ತಿರುವುದರಿಂದ ಅವರಿಗೆ ಮತ್ತೊಂದು ಅವಕಾಶ ನೀಡುವುದು ಬಹುತೇಕ ಖಚಿತವಾಗಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸ್ಥಾನದ ಆಫರ್ ನೀಡಲಾಗಿತ್ತು, ಆದರೆ ಅವರು ನಿರಾಕರಿಸಿದ್ದು ಮುಂದಿನ ಬೆಳವಣಿಗೆ ಕುರಿತಾಗಿ ಹೈಕಮಾಂಡ್ ಚಿಂತಿಸುತ್ತಿದೆ ಇದರ ನಡುವೆ ಆಂಧ್ರಪ್ರದೇಶ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಅವರ ಹೆಸರು ಪರಿಗಣನೆಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗು ಮಲ್ಲಿಕಾರ್ಜುನ ಖರ್ಗೆ ಅವರನ್ನು ವೈಎಸ್ ಶರ್ಮಿಳಾ ತಮ್ಮ ಪತಿ ಅನಿ ಜೊತೆಗೂಡಿ ದೆಹಲಿಗೆ ಹೋಗಿ ಚರ್ಚಿಸಿದ್ದಾರೆ ಎಂದು ವರದಿಗಳು ಹೇಳುತ್ತಿವೆ.ಇದಲ್ಲದೆ ವೈಎಸ್ ಶರ್ಮಿಳಾ ನೂತನ ಸಿಎಂ ಡಿಕೆ ಶಿವಕುಮಾರ್ ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎನ್ನಲಾಗುತ್ತಿದ್ದು,ಈ ತಿಂಗಳ 18 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಸೋಮವಾರ ಅಧಿಸೂಚನೆ ಬಂದಿದ್ದು,ಎಲ್ಲಾ ರಾಜ್ಯಗಳು ಮತ್ತು ಕರ್ನಾಟಕದ ಅಭ್ಯರ್ಥಿಗಳ ಹೆಸರುಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಯಾರು ಈ ಶರ್ಮಿಳಾ?
ವೈಎಸ್ ಶರ್ಮಿಳಾ ಆಂಧ್ರಪ್ರದೇಶ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಆಂಧ್ರದವರು ಮರೆತು ಹೋದ ಕಾಂಗ್ರೆಸ್ ಪಕ್ಷಕ್ಕೆ ತಾನು ಇದ್ದೀನಿ ಎಂದು ಆಂಧ್ರದಲ್ಲಿ ಕಾಂಗ್ರೆಸ್ ಜಂಡಾ ಹಾಗು ತಮ್ಮ ತಂದೆ ಆಂಧ್ರದ ಮಾಜಿ ಮುಖ್ಯಮಂತ್ರಿ ದಿವಂಗತ.ವೈಎಸ್ ರಾಜಶೇಖರರೆಡ್ದಿ ಅವರ ಪೋಟೊ ಹಿಡಿದುಕೊಂಡು ತಮ್ಮ ಸಹೋದರ ಆಂಧ್ರದ ಮಾಜಿ ಮುಖ್ಯಮಂತ್ರಿ ವೈ.ಆರ್.ಜಗನಮೊಹನ್ ರೆಡ್ಡಿ ವಿರುದ್ದ ರಾಜಕೀಯ ಹೋರಾಟ ನಡೆಸುತ್ತಿದ್ದಾರೆ.



