ನ್ಯೂಜ್ ಡೆಸ್ಕ್: ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಹೆಸರಲ್ಲಿ ದಾವಣಗೆರೆಯಲ್ಲಿ ಅಕ್ರಮವಾಗಿ ವಾಸ ಮಾಡುತ್ತಿದ್ದ ಪಾಕಿಸ್ತಾನ ಮೂಲದ ಕುಟುಂಬವನ್ನು ಬಂಧಿಸಲಾಗಿದೆ ಹಿಂದುಗಳ ಹೆಸರಿಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
ಫಾತಿಮಾ ಅಲ್ಲಿನ ಅಲ್ತಾಫ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಉಳಿದಂತೆ, ಮೊಹಮ್ಮದ್ ಹನೀಫ್ ಪಾಕಿಸ್ತಾನದವನಾಗಿರುವ ಹನೀಫ್ ಮತ್ತು ಅವನ ಸೊಸೆ, ಮಗಳು, ಅಳಿಯನನ್ನೂ ಬಂಧಿಸಲಾಗಿದೆ.ರಶೀದ್ ಅಲಿ ಸಿದ್ದಿಕಿ ಎಂಬಾತನ ಮಾವ ಮೊಹಮ್ಮದ್ ಹನೀಫ್ ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಪ್ರಮುಖ ಆರೋಪಿಯಾಗಿದ್ದು, ಸಿದ್ದಿಕಿ ಮೊಹಮ್ಮದ್ ಯಾಸಿನ್ (ಪುತ್ರ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದಾರೆ.
ಬೆಂಗಳೂರಲ್ಲಿ ಬಂಧನ
ಕಳೆದ ಆರು ವರ್ಷಗಳಿಂದ ನಕಲಿ ಗುರುತಿನೊಂದಿಗೆ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆ ಆತನ ಪತ್ನಿ ಮತ್ತು ಇತರ ಇಬ್ಬರನ್ನು ಭಾನುವಾರ ಬೆಂಗಳೂರಿನ ಜಿಗಣಿ ಪೋಲಿಸರು ಬಂಧಿಸಿದ್ದರು, ಪ್ರಾಥಮಿಕ ವಿಚಾರಣೆಯ ಪ್ರಕಾರ, ಪಾಕ್ ಪ್ರಜೆ ಪತ್ನಿ ಬಾಂಗ್ಲಾದೇಶದವರಾಗಿದ್ದು ಢಾಕಾದಲ್ಲಿ ವಿವಾಹವಾಗಿದ್ದರು.
2014ರಲ್ಲಿ ದೆಹಲಿಗೆ ಬಂದಿದ್ದ ದಂಪತಿಗಳು ನಂತರ 2018ರಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಬಂಧಿತ ಇನ್ನಿಬ್ಬರು ಆತನ ಸೋದರ ಅಳಿಯಂದಿರು ಎಂದು ತಿಳಿದುಬಂದಿದೆ. ಅವರೆಲ್ಲಾ ಹಿಂದೂ ಹೆಸರಿನೊಂದಿಗೆ ಗುರುತಿನ ದಾಖಲೆಗಳನ್ನು ಮಾಡಿಸಿಕೊಂಡಿದ್ದು ಪಾಕಿಸ್ತಾನ ಪ್ರಜೆ ರಷೀದ್ ಸಿದ್ದಿಕಿ ಅಲಿಯಾಸ್ ಶಂಕರ್ ಶರ್ಮಾ (48), ಆಯುಷಾ ಅನಿಫ್ ಅಲಿಯಾಸ್ ಆಶಾ ಶರ್ಮಾ (38), ಮೊಹಮ್ಮದ್ ಹನೀಫ್ ಅಲಿಯಾಸ್ ರಾಮ್ ಬಾಬಾ ಶರ್ಮಾ (73), ರುಬೀನಾ ಅಲಿಯಾಸ್ ರಾಣಿ ಶರ್ಮಾ (61) ಎಂದು ತಿಳಿದುಬಂದಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Monday, March 9



