ಮದನಪಲ್ಲಿ: ಆಂಧ್ರಪ್ರದೇಶ ಚಿತ್ತೂರು ಜಿಲ್ಲೆಯ ಪ್ರಖ್ಯಾತ ಪುಣ್ಯಕ್ಷೇತ್ರ ಬೋಯಕೊಂಡ ಗಂಗಮ್ಮ ದೇವಾಲಯ ಭಾನುವಾರ ಭಕ್ತರಿಂದ ತುಂಬಿ ತುಳುಕಾಡಿದೆ. ಆಷಾಡ ಮಾಸದ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಕ್ತರು ದರುಶನಕ್ಕೆ ಬಂದಿದ್ದಾರೆಂದು ದೇವಾಲಯದ ಅಧಿಕಾರಿಗಳು ಹೇಳುತ್ತಾರೆ.
ಆಷಾಡದ ಮೊದಲ ಭಾನುವಾರ ಗಂಗಮ್ಮನನ್ನು ವಿಶೇಷವಾಗಿ ಚಿನ್ನಾಭರಣ ಮತ್ತು ಪುಷ್ಪಗಳಿಂದ ಅಲಂಕರಿಸಿ, ಭಕ್ತರ ದರುಶನಕ್ಕೆ ಏರ್ಪಾಡು ಮಾಡಲಾಗಿತ್ತು ಆಂಧ್ರ ತೆಲಂಗಾಣ ತಮಿಳುನಾಡು ಮತ್ತು ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನಲೆಯಲ್ಲಿ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಂತು ದರುಶನ ಪಡೆದರು.
ಸಾಮಾನ್ಯ ದಿನಗಳಲ್ಲಿ ಬೆಳಗ್ಗೆ 7 ಗಂಟೆಗೆ ಅಮ್ಮನ ದರ್ಶನ ಆರಂಭವಾಗುತ್ತದೆ ಅದರೆ ಇಂದು ಆಷಾಡದ ಭಾನುವಾರದ ಹಿನ್ನಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಬೆಳಗ್ಗೆ 5 ಗಂಟೆಗೆ ದರ್ಶನ ಆರಂಭವಾಯಿತು,ಸಂಜೆ 5 ಗಂಟೆಯವರೆಗೂ ಭಕ್ತರ ದಟ್ಟಣೆ ಮುಂದುವರಿದಿತ್ತು. ಸುಮಾರು 40 ಸಾವಿರಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿದ್ದು ವಿವಿಧ ಸೇವಾ ಟಿಕೆಟ್ ಗಳ ಮೂಲಕ ಒಂದೇ ದಿನದಲ್ಲಿ ರೂ.10.50 ಲಕ್ಷ ಆದಾಯ ಸಂಗ್ರಹವಾಗಿದೆ. ದೇಗುಲದ ಅಧ್ಯಕ್ಷ ಶಂಕರ ನಾರಾಯಣ ಹಾಗೂ ಇವೋ ಚಂದ್ರಮೌಳಿ ಮತ್ತು ಸಿಬ್ಬಂದಿ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



